ಕರಾವಳಿ

ಎ.ಸುಬ್ರಹ್ಮಣ್ಯೇಶ್ವರ ರಾವ್ ನೇಮಕ ರದ್ದು : ಮಂಗಳೂರು ಪೊಲೀಸ್ ಕಮಿಷನರ್ ಆಗಿ ಡಾ. ಪಿ.ಎಸ್ ಹರ್ಷ ನೇಮಕ

Pinterest LinkedIn Tumblr

ಮಂಗಳೂರು : ದಕ್ಷ ಅಧಿಕಾರಿ ಮಂಗಳೂರು ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಅವರು ವರ್ಗಾವಣೆಗೊಂಡಿದ್ದು, ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಡಾ. ಪಿ.ಎಸ್ ಹರ್ಷ ಅವರನ್ನು ನೇಮಕಗೊಳಿಸಲಾಗಿದೆ.

ಮಂಗಳೂರು ನಗರದಲ್ಲಿ ಪೊಲೀಸ್ ಆಯುಕ್ತರಾಗಿ ದಕ್ಷ ಅಧಿಕಾರಿ ಎಂದೆ ಗುರುತಿಸಿಕೊಂಡಿದ್ದ ಸಂದೀಪ್ ಪಾಟೀಲ್ ಅವರನ್ನು ವರ್ಗಾವಣೆಗೊಳಿಸಿ ಮಂಗಳೂರಿನ ನೂತನ ಕಮಿಷನರ್ ಆಗಿ ಮತ್ತೋರ್ವ ದಕ್ಷ ಅಧಿಕಾರಿ ಎ.ಸುಬ್ರಹ್ಮಣ್ಯೇಶ್ವರ ರಾವ್ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದ ಸರಕಾರ ಇದೀಗ ಈ ಹಿಂದಿನ ಆದೇಶ ರದ್ದುಗೊಳಿಸಿ ಇದೀಗ ನೂತನ ಕಮಿಷನರ್ ಆಗಿ ಡಾ. ಪಿ.ಎಸ್ ಹರ್ಷ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

ಕೆಲವೇ ತಿಂಗಳ ಕಾಲ ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದ ಸಂದೀಪ್ ಪಾಟೀಲ್ ಜನಾನುರಾಗಿಯಾಗಿದ್ದರು. ಸಂದೀಪ್ ಪಾಟೀಲ್ ಅವರನ್ನು ಡಿಐಜಿ ಮತ್ತು ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಆಯುಕ್ತರಾಗಿ ತಕ್ಷಣದಿಂದಲೇ ಅಧಿಕಾರಕ್ಕೆ ಬರುವಂತೆ ನಿಯೋಜಿಸಲಾಗಿದೆ.

ಸಂದೀಪ್ ಪಾಟೀಲ್ ಅವರು ಮಂಗಳೂರಿನಲ್ಲಿ ಕೆಲವೇ ತಿಂಗಳ ಸೇವಾ ಅವಧಿಯಲ್ಲಿ ದಕ್ಷ ಅಧಿಕಾರಿ ಎನ್ನುವ ಹೆಗ್ಗಳಿಕೆಯನ್ನು ಪಡೆದುಕೊಂಡಿದ್ದರು. ಅಕ್ರಮ ಗೋಸಾಗಾಣಿಕೆ, ಗಾಂಜಾ ಮಾರಾಟಗಾರರಿಗೆ ಕಡಿವಾಣ ಹಾಕಿದ್ದರು. ರೌಡಿಶೀಟರ್‌ಗಳ ಹೆಡೆಮುರಿ ಕಟ್ಟಲು ಶೂಟೌಟ್ ಆದೇಶವನ್ನೂ ನೀಡಿದ್ದರು. ಸಾಮಾಜಿಕ ಜಾಲತಾಣದ ಮೂಲಕ ಸಾರ್ವಜನಿಕರ ದೂರು ದುಮ್ಮಾನಗಳನ್ನು ಆಲಿಸುತ್ತಿದ್ದ ಸಂದೀಪ್ ಪಾಟೀಲ್ ಪೊಲೀಸ್ ಫೋನ್ ಇನ್ ಕಾರ್ಯಕ್ರಮದ ಮೂಲಕವೂ ಜನಪ್ರಿಯರಾಗಿದ್ದರು.

ಎಎಸ್ಪಿಯಾಗಿದ್ದಾಗ ಗೂಂಡಾಗಿರಿ ಮಟ್ಟ ಹಾಕಿದ ಅಧಿಕಾರಿ :

2004ರ ಐಪಿಎಸ್ ಬ್ಯಾಚ್‌ನವರಾಗಿರುವ ಡಾ. ಹರ್ಷ ಅವರು ಈ ಹಿಂದೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರು ಇದರ ಭದ್ರತಾ ವಿಭಾಗದ (ವಿಜಿಲೆನ್ಸ್ ಮತ್ತು ಸೆಕ್ಯೂರಿಟಿ) ನಿರ್ದೇಶಕರಾಗಿದ್ದರು ಕಾರಾಗೃಹ ಇಲಾಖೆ ಡಿಐಜಿಯಾಗಿಯೂ ಕರ್ತವ್ಯ ನಿರ್ವಾಹಿಸಿದ್ದರು., 2017ರಲ್ಲಿ ವಾರ್ತಾ ಇಲಾಖೆಯ ಆಯುಕ್ತರಾಗಿ ಕಾರ್ಯ ನಿರ್ವಹಿಸಿದ್ದರು. ಅಲ್ಲದೆ ಪುತ್ತೂರು ಉಪವಿಭಾಗದ ಎಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದರು. ಪುತ್ತೂರಿನಲ್ಲಿ ಎಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ಸಂದರ್ಭ ಪುತ್ತೂರು ದೇವಸ್ಥಾನ ಎದುರು ನಡೆದ ಶನಿಪೂಜೆ ವಿವಾದದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಶ್ರಮಿಸಿದ್ದರು. ಇದು ಮಾತ್ರವಲ್ಲದೆ, ಈ ವ್ಯಾಪ್ತಿಯಲ್ಲಿ ಗೂಂಡಾಗಿರಿ ಮಟ್ಟ ಹಾಕುವಲ್ಲಿ ಕಠಿಣ ಕ್ರಮ ಕೈಗೊಂಡಿದ್ದರು. ಪ್ರಸ್ತುವ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ಕಮೀಷನರ್ ಆಗಿ ನೇಮಕಗೊಳಿಸಿ ಸರಕಾರ ಆದೇಶ ನೀಡಿದೆ.

ಹನುಮಂತ್ ರಾಯ್ ವರ್ಗಾವಣೆ : ನೂತನ ಡಿಸಿಪಿ ನೇಮಕ

ಇದೇ ವೇಳೆ ನಗರದ ಕಾನೂನು ಸುವ್ಯವಸ್ಥೆ ವಿಭಾಗದ ನೂತನ ಪೊಲೀಸ್ ಉಪ ಆಯುಕ್ತರಾಗಿ (ಕಾನೂನು ಸುವ್ಯವಸ್ಥೆ) ಡಾ.ಅರುಣಾಂಶ್ ಗಿರಿ ಅವರನ್ನು ನೇಮಕ ಮಾಡಲಾಗಿದೆ. ಈ ವಿಭಾಗದಲ್ಲಿ ಈ ಹಿಂದೆ ಡಿಸಿಪಿಯಾಗಿದ್ದ ಹನುಮಂತ್ ರಾಯ್ ಅವರನ್ನು ವರ್ಗಾವಣೆಗೊಳಿಸಲಾಗಿದೆ.

ಅರುಣಾಂಶ್ ಈ ಮೊದಲು ಕಾರ್ಕಳದ ನಕ್ಸಲ್ ನಿಗ್ರಹ ದಳದಲ್ಲಿ ಎಸ್‌ಪಿ ಆಗಿದ್ದರು. ಪ್ರಸ್ತುತ ಡಿಸಿಪಿಯಾಗಿರುವ ಹನುಮಂತರಾಯ ಅವರನ್ನು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಳಿಸಿ ಸರಕಾರ ಜು.1ರಂದು ಆದೇಶ ಹೊರಡಿಸಿತ್ತು.

Comments are closed.