
ಸಾಂಗ್ಲಿ(ಮಹಾರಾಷ್ಟ್ರ): ಕೃಷ್ಣಾ ನದಿ ಪ್ರವಾಹದಲ್ಲಿ ರಕ್ಷಣಾ ದೋಣಿ ಮುಳುಗಿ 11 ಮಂದಿ ಸಾವಿಗೀಡಾಗಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಪಟ್ಟಣದಲ್ಲಿ ನಡೆದಿದೆ.
ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿ ತುಂಬಿ ಹರಿಯುತ್ತಿದೆ. ನದಿ ಪಾತ್ರದ ಗ್ರಾಮಗಳಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಪ್ರವಾಹದ ನಡುವೆ ಸಿಲುಕಿದ್ದವರ ರಕ್ಷಣೆಗೆ ತೆರಳಿದ್ದ ರಕ್ಷಣಾ ಬೋಟ್ ಮುಳುಗಿದೆ. ಸಾಂಗ್ಲಿ ಜಿಲ್ಲೆಯ ಪಲೂಸ್ ತಾಲುಕಿನಲ್ಲಿ ಘಟನೆ ನಡೆದಿದೆ.
30 ಮಂದಿಯನ್ನು ಹೊತ್ತೊಯ್ಯುತ್ತಿದ್ದ ರಕ್ಷಣಾ ಬೋಟ್ ಮುಳುಗಿ 11 ಮಂದಿ ಮೃತರಾಗಿದ್ದಾರೆ. ನಾಲ್ವರು ಮಹಿಳೆಯರು, ಮೂವರು ಪುರುಷರು ಹಾಗೂ ಇಬ್ಬರು ಮಕ್ಕಳು ಸೇರಿ 9 ಮಂದಿಯ ಮೃತದೇಹವನ್ನು ವಶಕ್ಕೆ ಪಡೆಯಲಾಗಿದ್ದು, ಉಳಿದ ಎರಡು ಮೃತದೇಹಗಳಿಗಾಗಿ ರಕ್ಷಣಾ ಕಾರ್ಯ ಭರದಿಂದ ಸಾಗಿದೆ
Comments are closed.