ಉಡುಪಿ: ಜಿಲ್ಲೆಯಲ್ಲಿ ತೀವ್ರ ಮಳೆಯ ಕಾರಣ ರೆಡ್ ಅಲರ್ಟ್ ಜಾರಿಯಲ್ಲಿದ್ದು ಆಗಸ್ಟ್ 9 ರಂದು (ಶುಕ್ರವಾರ) ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

(File Photo)
ಜಿಲ್ಲಾದ್ಯಂತ ಮಳೆ ಮುಂದುವರಿದಿದ್ದು ಶುಕ್ರವಾರವೂ ಕೂಡ ವಿಪರೀತ ಮಳೆಯಾಗುವ (204 ಮೀ.ಮೀ.) ಆಗುವ ಮತ್ತು ಕರಾವಳಿ ತೀರ ಪ್ರದೇಶದಲ್ಲಿ ಭಾರೀ ಗಾಳಿ ಬೀಸುವ ಸಂಭವವಿರುವ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಜಿಲ್ಲಾಧಿಕಾರಿಗಳು ಶಾಲೆ-ಕಾಲೇಜಿಗೆ ರಜೆ ಘೋಷಿಸಿದ್ದಾರೆ.
ಬಾರೀ ಗಾಳಿ ಮಳೆಯ ಬಗ್ಗೆ ಹವಮಾನ ಇಲಾಖೆಯಿಂದ ಮುನ್ಸೂಚನೆ ಬಂದಿದೆ ಎಂದು ಪ್ರಕಟಣೆ ತಿಳಿಸಿದೆ.
Comments are closed.