
ಬಿಯಾರಿಟ್ಜ್/ಲಂಡನ್: ಪ್ರಧಾನಿ ನರೇಂದ್ರ ಮೋದಿ ಅವರು ಅತ್ಯದ್ಬುತವಾಗಿ ಇಂಗ್ಲಿಷ್ ಮಾತನಾಡುತ್ತಾರೆ. ಆದರೆ, ಮಾತನಾಡಲು ಇಷ್ಟಪಡುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಹಾಸ್ಯ ಚಟಾಕಿ ಹಾರಿಸಿದ್ದಾರೆ.
ಜಿ7 ಶೃಂಗಸಭೆ ಭಾಗವಾಗಿ ಪ್ರಧಾನಿ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಸಾಂಪ್ರದಾಯಿಕವಾಗಿ ಮಾತುಕತೆ ಆರಂಭಿಸುವ ಮುನ್ನ ಟ್ರಂಪ್ ಹೀಗೆ ತಮಾಷೆ ಮಾಡಿದ್ದಾರೆ. ಎರಡು ದೇಶಗಳ ನಾಯಕರು ಫ್ರೆಂಚ್ನ ಬಿಯಾರಿಟ್ಜ್ ನಗರದಲ್ಲಿ ಸುಮಾರು 40 ನಿಮಿಷಗಳ ಕಾಲ ಚರ್ಚೆ ನಡೆಸಿದರು.
ಇಬ್ಬರು ನಾಯಕರು ಹಸ್ತಲಾಘವ ನೀಡುವ ಮೂಲಕ ಮಾಧ್ಯಮ ಮುಂದೆ ಮಾತನಾಡಿದರು. ಈ ವೇಳೆ ಸುದ್ದಿಗಾರರ ಪ್ರಶ್ನೆಗೆ ಪ್ರಧಾನಿ ಮೋದಿ ಹಿಂದಿ ಭಾಷೆಯಲ್ಲಿ ಉತ್ತರ ನೀಡುತ್ತಿದ್ದರು. ಈ ವೇಳೆ ಟ್ರಂಪ್ ಅವರು ವಾಸ್ತವದಲ್ಲಿ ಇವರು (ಮೋದಿಗೆ) ಅದ್ಭುತವಾಗಿ ಇಂಗ್ಲಿಷ್ ಮಾತನಾಡುತ್ತಾರೆ. ಆದರೆ, ಮಾತನಾಡಲು ಬಯಸುವುದಿಲ್ಲ ಎಂದು ಹಾಸ್ಯ ಚಟಾಕಿ ಹಾರಿಸಿದಾಗ, ಎಲ್ಲರೂ ಗೊಳ್ ಎಂದು ನಕ್ಕರು.
Comments are closed.