ಕರಾವಳಿ

ಉಡುಪಿಯ ಜೀವನದಿ ಸ್ವರ್ಣೆಗೆ ಬಾಗಿನ ಅರ್ಪಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ದಂಪತಿ

Pinterest LinkedIn Tumblr

ಉಡುಪಿ: ರಾಜ್ಯದ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಡುಪಿಯ ಜೀವನದಿ ಸ್ವರ್ಣೆಗೆ ಬಾಗಿನ ಅರ್ಪಿಸಿದ್ದಾರೆ. ಶೀಂಬ್ರ ಸಿದ್ಧಿ ವಿನಾಯಕ ದೇವಸ್ಥಾನದ ತಪ್ಪಲಲ್ಲಿರುವ ಸ್ನಾನ ಘಟ್ಟಕ್ಕೆ ಕೋಟ ದಂಪತಿ ಸಮೇತ ಗುರುವಾರದಂದು ಆಗಮಿಸಿ ಸ್ವರ್ಣೆಗೆ ಬಾಗಿನ ಅರ್ಪಿಸಿದರು.

 

ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು, ತೀರ್ಥ, ಹಾಲು, ಬಾಗಿನವನ್ನು ಅರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಾಗಿನ ಅರ್ಪಿಸುವ ಪುಣ್ಯ ಕಾರ್ಯದಲ್ಲಿ ಭಾಗಿಯಾಗಿದ್ದೇನೆ. ಶೀಂಬ್ರ ದೇವಸ್ಥಾನ, ಸ್ನಾನಘಟ್ಟವನ್ನು ಮುಜರಾಯಿ ಇಲಾಖೆಯಿಂದ ಅಭಿವೃದ್ಧಿ ಮಾಡಲಾಗುವುದು. ಡಾ. ವಿ.ಎಸ್ ಆಚಾರ್ಯರ ಕಾಲದಿಂದ ಈ ಕ್ಷೇತ್ರ ಪ್ರಸಿದ್ಧಿಯಲ್ಲಿದ್ದು ಅವರ ಕನಸಿನಂತೆ ಇಲ್ಲಿ ಇನ್ನಷ್ಟು ಅಭಿವೃದ್ಧಿ ಮಾಡುವೆ ಎಂದರು. ಈ ವೇಳೆ ಉಡುಪಿ ಶಾಸಕರಾದ ರಘುಪತಿ ಭಟ್  ಸಾತ್ ನೀಡಿದ್ದರು.

ವಾಸುದೇವ ಭಟ್ ಪೆರಂಪಳ್ಳಿ ಅವರ ಮಾರ್ಗದರ್ಶನದಲ್ಲಿ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಬಳಿಕ ಶ್ರೀ ಸಿದ್ಧಿವಿನಾಯಕ ದೇವರಿಗೆ ಮಂಗಳಾರತಿ ನಡೆಸಲಾಯಿತು. ಅರ್ಚಕ ನವೀನ್ ಶಿವತ್ತಾಯ, ಆಡಳಿತ ಮಂಡಳಿ ಸದಸ್ಯ ಕೃಷ್ಣಮೂರ್ತಿ ಶಿವತ್ತಾಯ, ಇಂಜಿನಿಯರ್ ರಮೇಶ್ ರಾವ್ ಇದ್ದರು.

ನಗರ ಸಭಾ ಸದಸ್ಯರುಗಳಾದ ಮಂಜುಳಾ ನಾಯಕ್, ಮಂಜುನಾಥ ಶೆಟ್ಟಿಗಾರ್, ಬಾಲಕೃಷ್ಣ ಶೆಟ್ಟಿ, ಚಂದ್ರಶೇಖರ್, ಜಯಂತಿ ಪೂಜಾರಿ, ಗಿರೀಶ್ ಅಂಚನ್, ಗಿರಿಧರ್ ಕರಂಬಳ್ಳಿ, ಮಾಜಿನಗರ ಸಭಾಧ್ಯಕ್ಷ ಹೆರ್ಗ ದಿನಕರ ಶೆಟ್ಟಿ ,ಹರಿಕೃಷ್ಣ ಶಿವತ್ತಾಯ, ಸತೀಶ್ ಕುಮಾರ್, ಶ್ರೀನಿವಾಸ ಬಲ್ಲಾಳ್ ಮೊದಲಾದವರು ಉಪಸ್ಥಿತರಿದ್ದರು.

Comments are closed.