ಕರಾವಳಿ

ಸೆ.01: ರೋಟರಿಯಿಂದ ಶಿಕ್ಷಕರ ಪ್ರತಿಭಾನ್ವೇಷಣೆ ಸ್ಪರ್ಧೆ – ಗುರುವಂದನ 2019 ಕಾರ್ಯಕ್ರಮ

Pinterest LinkedIn Tumblr

ಮಂಗಳೂರು : ಶಿಕ್ಷಕರ ದಿನಾಚರಣೆ ಪ್ರಯುಕ್ತ ವಾಗಿ ನಗರದ ರೋಟರಿ ಕ್ಲಬ್ ಮಂಗಳೂರು ಸೀಸೈಡ್ ವತಿಯಿಂದ ಶಿಕ್ಷಕರ ಪ್ರತಿಭಾನ್ವೇಷಣೆ ಸ್ಪರ್ಧೆ – ಗುರುವಂದನ 2019 ಕಾರ್ಯಕ್ರಮವನ್ನು ಸಪ್ಟೆಂಬರ್ 1ರಂದು ಎಸ್ ಡಿ ಎಂ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಿದೆ.

ಕಾರ್ಯಕ್ರಮವನ್ನು ರೋಟರಿ ಜಿಲ್ಲೆ 3181ರ ಜಿಲ್ಲಾ ಗವರ್ನರ್ ಜೋಸೆಫ್ ಮ್ಯಾಥ್ಯು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್, ಶ್ರೀದೇವಿ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರು ಸದಾನಂದ ಶೆಟ್ಟಿ, ರೋಟರಿ ವಲಯ 3ರ ಉಪ ರಾಜ್ಯಪಾಲರು ಸುಮಿತ್ ರಾವ್ ಭಾಗವಹಿಸಲಿದ್ದಾರೆ.

ರೋಟರಿ ಅಧ್ಯಕ್ಷ ವಾಸುದೇವ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾಥಮಿಕ, ಪ್ರೌಢಶಾಲಾ ಹಾಗೂ ಕಾಲೇಜು ವಿಭಾಗದ ಶಿಕ್ಷಕರಿಗೆ ಗಾಯನ, ನೃತ್ಯ, ರಸಪ್ರಶ್ನೆ, ಕೊಲಾಜ್ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವಿಧ ಸ್ಪರ್ಧೆಗಳನ್ನು ಆಯೋಜಿಸ ಲಾಗಿದೆ ಎಂದು ಕಾರ್ಯಕ್ರಮ ಸಂಯೋಜಕರಾದ ಶ್ರೀಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.