
ನವದೆಹಲಿ(ಆ30): ಸಾರ್ವಜನಿಕ ವಲಯದ 27 ಬ್ಯಾಂಕುಗಳನ್ನು 12 ಬ್ಯಾಂಕುಗಳೊಂದಿಗೆ ವಿಲೀನ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಬ್ಯಾಂಕಿಂಗ್ ವಲಯದಿಂದ ತೀವ್ರ ಖಂಡನೆ ವ್ಯಕ್ತವಾಗಿದೆ. ಬ್ಯಾಂಕ್ಗಳ ವಿಲೀನದಿಂದ ಸ್ಥಿರತೆಯನ್ನು ಕಾಯ್ದುಕೊಳ್ಳಲು ಸಾಧ್ಯವಿಲ್ಲ, ಆರ್ಥಿಕ ಅಭಿವೃದ್ದಿಯೂ ಸಾಧ್ಯವಿಲ್ಲ ಎಂದು ಶನಿವಾರ ಎಲ್ಲಾ ಸಾರ್ವಜನಿಕ ವಲಯದ ಬ್ಯಾಂಕ್ ಸಿಬ್ಬಂದಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕ ವಲಯದ 27 ಬ್ಯಾಂಕುಗಳನ್ನು 12 ಬ್ಯಾಂಕುಗಳೊಂದಿಗೆ ವಿಲೀನ ಮಾಡುವುದಾಗಿ ಘೋಷಿಸಿದರು.
ಬ್ಯಾಂಕ್ ಎಂಪ್ಲಾಯೀಸ್ ಫೆಡರೇಷನ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿಯಾದ ದೇಬಾಸಿಸ್ ಬಸು ಚೌಧರಿ ಬ್ಯಾಂಕುಗಳ ವಿಲೀನದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬ್ಯಾಂಕುಗಳ ವಿಲೀನದಿಂದ ಸ್ಥಿರತೆ ಕಾಯ್ದುಕೊಳ್ಳಲು ಸಾಧ್ಯವಿಲ್ಲ. ಇದರಿಂದ ಆರ್ಥಿಕ ಅಭಿವೃದ್ಧಿಯೂ ಸಾಧ್ಯವಿಲ್ಲ. ಇದು ಬ್ಯಾಂಕಿಂಗ್ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಹಾಗೂ ಹಣಕಾಸಿನ ಸೇರ್ಪಡೆ ಗುರಿಯ ವಿರುದ್ಧವಾಗಿಯೂ ಇದೆ ಎಂದರು.
ಕೆನರಾ, ಸಿಂಡಿಕೇಟ್ ಸೇರಿ ಹಲವು ಬ್ಯಾಂಕುಗಳು ವಿಲೀನ; ಬ್ಯಾಂಕಿಂಗ್ ವಲಯದ ಬಲವರ್ಧನೆಗೆ ಕ್ರಮ ಎಂದ ವಿತ್ತ ಸಚಿವೆ
ಜಂಟಿ ಪ್ಲಾಟ್‌ಫಾರ್ಮ್ ಆಫ್ ಬ್ಯಾಂಕಿಂಗ್ ಯೂನಿಯನ್‌ನ ಸಹಯೋಗದಲ್ಲಿ ಈ ಪ್ರತಿಭಟನೆ ನಡೆಯಲಿದೆ. ಇದರಲ್ಲಿ ಒಂಬತ್ತು ಒಕ್ಕೂಟಗಳು ಮತ್ತು ಭಾರತದ ಎಲ್ಲಾ ಸಾರ್ವಜನಿಕ ವಲಯದ ಬ್ಯಾಂಕುಗಳ ಪ್ರಾತಿನಿಧ್ಯವಿದೆ ಎಂದು ಚೌಧರಿ ತಿಳಿಸಿದರು.
ನಾವು ಈ ಬ್ಯಾಂಕುಗಳ ವಿಲೀನಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದೇವೆ. ಈ ಹಿಂದೆ ಬ್ಯಾಂಕುಗಳು ವಿಲೀನಗೊಂಡ ಬಳಿಕ ಶಾಖೆಗಳು ಮತ್ತು ಕಚೇರಿಗಳು ಮುಚ್ಚಲ್ಪಟ್ಟಿರುವುದನ್ನು ನಾವು ನೋಡಿದ್ದೇವೆ ಎಂದರು.
ಚೇತರಿಕೆ ಕಾಣದ ದೇಶದ ಆರ್ಥಿಕತೆ; ಶೇ.5ಕ್ಕೆ ಕುಸಿದ ಜಿಡಿಪಿ
ಪಂಜಾಬ್ ನ್ಯಾಷನಲ್ ಬ್ಯಾಂಕ್, ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಮತ್ತು ಯುನೈಟೆಡ್ ಬ್ಯಾಂಕ್ಅನ್ನು ವಿಲೀನ ಮಾಡಲಾಗಿದೆ. ಕೆನರಾ ಬ್ಯಾಂಕ್ ಮತ್ತು ಸಿಂಡಿಕೇಟ್ ಬ್ಯಾಂಕ್ ಒಂದಾಗಿವೆ ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಆಂಧ್ರಾ ಬ್ಯಾಂಕ್ ಮತ್ತು ಕಾರ್ಪೊರೇಷನ್ ಬ್ಯಾಂಕ್ ಗಳು ವಿಲೀನವಾಗಿವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದರು.
ಬ್ಯಾಂಕ್ ಆಫ್ ಇಂಡಿಯಾ ಮತ್ತು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ರಾಷ್ಟ್ರೀಯ ಸಮಕ್ಷಮದಲ್ಲಿ ಮುಂದುವರೆಯಲಿದೆ. ಇಂಡಿಯನ್ ಓವರ್ಸೀಸ್ ಬ್ಯಾಂಕ್, ಯುಸಿಒ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ ಮತ್ತು ಪಂಜಾಬ್, ಸಿಂಧ್ ಬ್ಯಾಂಕ್ಗಳು ಪ್ರಾದೇಶಿಕ ಉಪಸ್ಥಿತಿಯಲ್ಲಿ ಮುಂದುವರೆಯಲಿವೆ ಎಂದು ಹೇಳಿದ್ದರು.
Comments are closed.