ಕರ್ನಾಟಕ

ಕೆಎಂಎಫ್ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ

Pinterest LinkedIn Tumblr

ಬೆಂಗಳೂರು: ತೀವ್ರ ಕೂತೂಹಲ ಮೂಡಿಸಿದ್ದ ಕರ್ನಾಟಕ ಹಾಲು ಒಕ್ಕೂಟ ಚುನಾವಣೆಯಲ್ಲಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆಯಾಗಿದ್ದಾರೆ.

ಸುಮಾರು 11 ನಿರ್ದೇಶಕರು ಬಾಲಚಂದ್ರ ಜಾರಕಿಹೊಳಿ ಬೆಂಬಲಕ್ಕೆ ನಿಂತಿದ್ದರು. ಕಾಂಗ್ರೆಸ್ ಬೆಂಬಲಿತ 6, ಜೆಡಿಎಸ್ 1, ಬಿಜೆಪಿಯ ಓರ್ವ ನಿರ್ದೇಶಕರು ಸೇರಿದಂತೆ ಮೂವರು ಅಧಿಕಾರಿಗಳು ಜಾರಕಿಹೊಳಿಗೆ ಬೆಂಬಲ ನೀಡಿದ್ದರು.

ಜುಲೈ 29 ರಂದು ನಡೆಯಬೇಕಾದ ಚುನಾವಣೆ ಮುಂದೂಡಿಕೆಯಾದ ಹಿನ್ನೆಲೆಯಲ್ಲಿ ಬಾಲಚಂದ್ರ ಜಾರಕಿಹೊಳಿಗೆ ಈ ಅದೃಷ್ಟ ಒಲಿದು ಬಂದಿದೆ ಎಂದು ಹೇಳಲಾಗುತ್ತಿದೆ.

16 ಸದಸ್ಯ ಬಲ ಹೊಂದಿರುವ ಕೆಎಂಎಫ್ ಒಕ್ಕೂಟದಲ್ಲಿ ಕಾಂಗ್ರೆಸ್ ಬೆಂಬಲಿತ 9 ಜೆಡಿಎಸ್ ಬೆಂಬಲಿತ 3 ನಿರ್ದೇಶಕರು ಹಾಗೂ ನಾಲ್ವರು ನಾಮ ನಿರ್ದೇಶಿತ ಸದಸ್ಯರಿದ್ದಾರೆ, ಸರ್ಕಾರದಿಂದ ಬಾಲಚಂದ್ರ ಜಾರಕಿಹೊಳಿ ನಾಮ ನಿರ್ದೇಶನ ಮಾಡಿರುವ ಹಿನ್ನೆಲೆಯಲ್ಲಿ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

Comments are closed.