ಕುಂದಾಪುರ: ವಕ್ವಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ 26 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಾರಂಭವು ಅದ್ಧೂರಿಯಾಗಿ ನಡೆಯಿತು. 25ನೇ ವರ್ಷದ ಗಣೇಶೋತ್ಸವ ಸಮಿತಿಯ ಉಳಿಕೆ ಹಣದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 60 ಸಾವಿರ ಮೌಲ್ಯದ ಸೇಫ್ ಲಾಕರ್ ನೀಡಲಾಯಿತು.
ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ, ದುಬೈ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಲಾಕರ್ ಸ್ವೀಕರಿಸಿ ಮಾತನಾಡಿ, ದೇವಸ್ಥಾನದ ಅಭಿವೃದ್ಧಿ ಮೂಲಕ ಊರಿನ ಸಮಗ್ರ ಏಳಿಗೆಗೆ ಶ್ರಮ ವಹಿಸೋಣ. ಇಂತಹ ಕಾರ್ಯಕ್ರಮಗಳ ಮೂಲಕ ಸಂಘಟಿತರಾಗೋಣ ಎಂದರು.


ಈ ಸಂದರ್ಭ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ. ನಾರಾಯಣ ಶೆಟ್ಟಿ, ವ್ಯವಸ್ಥಾಪನ ಸಮಿತಿ ಉಪಾಧ್ಯಕ್ಷ ಆನಂದ ಆಚಾರ್ಯ, ಕಾರ್ಯದರ್ಶಿ ಗಿರೀಶ್ ಐತಾಳ್, ಸದಸ್ಯರಾದ ರಂಜಿತ್ ಕುಮಾರ್ ಶೆಟ್ಟಿ, ಅಶೋಕ್ ಪೂಜಾರಿ, ದಿವಾಕರ, ಅಕ್ಕಯ್ಯ ಶೆಟ್ಟಿ, ನಾರಾಯಣ ದೇವಾಡಿಗ, ದಾನಿ ವಕ್ವಾಡಿ ಗಣೇಶ್ ಆಚಾರ್ ಸಾಗರ, ವಕ್ವಾಡಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಮನೋಹರ ಆಚಾರ್, ಉಪಾಧ್ಯಕ್ಷರಾದ ರಾಘವೇಂದ್ರ ಆಚಾರ್ ಜಿ., ರವಿರಾಜ ಶೆಟ್ಟಿ, ಸದಸ್ಯ ಗಣೇಶ್ ಆಚಾರ್ ಹಾಗೂ ಪದಾಧಿಕಾರಿಗಳು ಸ್ಥಳೀಯ ಮುಖಂಡರಾದ ರಘುರಾಮ ಶೆಟ್ಟಿ, ಕರುಣಾಕರ ಶೆಟ್ಟಿ, ಪುಟ್ಟರಾಜ ಹೆಬ್ಬಾರ್ ಮೊದಲಾದವರಿದ್ದರು.
(ವರದಿ- ಯೋಗೀಶ್ ಕುಂಭಾಸಿ)
Comments are closed.