
ಮಂಗಳೂರು, ಸೆಪ್ಟಂಬರ್. 01 : ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿ ಮತ್ತು ತಾಲೂಕು ಬಂಟರ ಸಂಘ ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ ಬಂಟರ ಮಾತೃ ಸಂಘ ಹಾಗೂ ದ.ಕ, ಉಡುಪಿ, ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳ ಇತರ ಸಂಘ- ಸಂಸ್ಥೆಗಳ ಹಾಗೂ ಎಲ್ಲಾ ಜಾತಿ-ಮತ ಬಾಂಧವರ ಸಹಕಾರದೊಂದಿಗೆ ಶ್ರದ್ಧಾ ಭಕ್ತಿಯೊಂದಿಗೆ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಓಂಕಾರ ನಗರ ಬಂಟ್ಸ್ಹಾಸ್ಟೆಲ್ ಇದರ 16ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.1ರಿಂದ 4ರವರೆಗೆ ಬಂಟ್ಸ್ ಹಾಸ್ಟೆಲ್ನ ಓಂಕಾರ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸೆ.1ರಂದು ಬಾನುವಾರ ಸಂಜೆ ಶರವು ದೇವಸ್ಥಾನದ ಬಳಿ ಇರುವ ಶ್ರೀ ರಾಧಾಕೃಷ್ಣ ದೇವಸ್ಥಾನದಿಂದ ಪ್ರಾರ್ಥನೆ ಮಾಡಿ ಶ್ರೀ ಸಿದ್ಧಿ ವಿನಾಯಕ ದೇವರ ವಿಗ್ರಹವನ್ನು ಬಂಟ್ಸ್ ಹಾಸ್ಟೆಲ್ನ ಓಂಕಾರ ನಗರಕ್ಕೆ ಬರಮಾಡಿಕೊಳ್ಳಲಾಯಿತು.

ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಮಾಲಾಡಿ ಅಜಿತ್ ಕುಮಾರ್ ರೈ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಟ್ರಸ್ಟಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸಂಚಾಲಕಿ ಡಾ.ಆಶಾಜ್ಯೋತಿ ರೈ, ಬಂಬ್ರಾಣ, ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ ಅಡ್ಯಾರ್, ಕೋಶಾಧಿಕಾರಿ ಉಮೇಶ್ ರೈ ಮೇಗಿನಮನೆ, ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ವಶಂತ್ ಶೆಟ್ಟಿ, ಮಹಿಳಾ ವಿಭಾಗದ ಗೌರವಾಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮೀ ಎಸ್.ಹೆಗ್ಡೆ, ಅಡ್ಯಾರ್ ಮುಂತಾದವರು ಈ ವೇಳೆ ಉಪಸ್ಥಿತರಿದ್ದರು.

ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಮಾಲಾಡಿ ಅಜಿತ್ ಕುಮಾರ್ ರೈ ಅವರ ನೇತ್ರತ್ವದಲ್ಲಿ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಸಾರ್ವಜನಿಕ ಶ್ರೀ ಗಣೇಶೋತ್ಸವವು ವಿವಿಧ ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸೆ.2ರಂದು ಸೋಮವಾರ ಬೆಳಿಗ್ಗೆ 8ಗಂಟೆಗೆ ಸ್ಥಳ ಶುದ್ಧಿ, ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಸಾಮೂಹಿಕ ಪ್ರಾರ್ಥನೆ, ಬಳಿಕ ಧ್ವಜಾರೋಹಣ, ಮೂರ್ತಿ ಪ್ರತಿಷ್ಠೆ, ಗಣಹೋಮದೊಂದಿಗೆ ಣೇಶೋತ್ಸವ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಲಿದೆ.
Comments are closed.