
ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ನದಿ ತೊರೆಗಳು ಉಕ್ಕಿ ಹರಿಯುತ್ತಿದೆ. ಜಿಲ್ಲೆಯ ಭದ್ರಾ ನದಿ ಮೈದುಂಬಿ ಹರಿಯುತ್ತಿದ್ದು, ಹೆಬ್ಬಾಳೆ ಸೇತುವೆ ಮುಳುಗಡೆ ಭೀತಿ ಎದುರಿಸುತ್ತಿದೆ.
ಭಾರಿ ಮಳೆಯಿಂದಾಗಿ ಭದ್ರಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಕಳಸ – ಹೊರನಾಡಿನ ನಡುವೆ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮುಳುಗಡೆಯ ಹಂತದಲ್ಲಿದೆ. ಸೇತುವೆ ಮುಳುಗಡೆಗೆ ಒಂದೇ ಒಂದು ಅಡಿಯಷ್ಟು ಬಾಕಿ ಇದ್ದು, ಕುದುರೆಮುಖ, ಕಳಸ, ಸಂಸೆ, ಬಾಳೆಹೊಳೆ ವ್ಯಾಪ್ತಿಯಲ್ಲಿ ಭಾಗದಲ್ಲಿ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹೆಬ್ಬಾಳೆ ಸೇತುವೆ ಮತ್ತೆ ಮುಳುಗಡೆಯಾಗುವ ಭೀತಿ ಎದುರಿಸುತ್ತಿದೆ.
ಒಂದು ವೇಳೆ ಹೆಬ್ಬಾಳೆ ಸೇತುವೆ ಮುಳುಗಡೆಯಾದರೆ ಕಳಸ ಹೊರನಾಡಿನ ಸಂಪರ್ಕ ಸಂಪೂರ್ಣ ಕಡಿತವಾಗಲಿದೆ. ಕಳೆದ ತಿಂಗಳು ಸುರಿದಿದ್ದ ಭಾರಿ ಮಳೆಯಿಂದಾಗಿ ಹೆಬ್ಬಾಳೆ ಸೇತುವೆ ನಾಲ್ಕು ದಿನಗಳ ಕಾಲ ಮುಳುಗಡೆಯಾಗಿತ್ತು.
Comments are closed.