ಕರ್ನಾಟಕ

ಬೆಂಗಳೂರು: ನೇಣು ಬಿಗಿದು ಐಎಫ್​ಎಸ್​ ಅಧಿಕಾರಿ ಆತ್ಮಹತ್ಯೆ

Pinterest LinkedIn Tumblr


ಬೆಂಗಳೂರು (ಸೆ. 8): ನಗರದ ಯಲಹಂಕದ ಅಪಾರ್ಟ್​ಮೆಂಟ್​ನಲ್ಲಿ ಐಎಫ್​ಎಸ್​ ಅಧಿಕಾರಿ ಡಾ. ಅವತಾರ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವತಾರ್ ಸಿಂಗ್ ಅವರಿಗೆ 58 ವರ್ಷಗಳಾಗಿತ್ತು. ನಿವೃತ್ತಿಗೆ ಇನ್ನು ಎರಡೇ ವರ್ಷಗಳು ಬಾಕಿಯಿದ್ದವು. ಯಲಹಂಕದ ಪ್ರೆಸ್ಟೀಜ್ ಮೌಂಟ್ ಕಾರ್ಲೋ ಅಪಾರ್ಟ್​ಮೆಂಟ್​ನ 4ನೇ ಮಹಡಿಯ ತಮ್ಮ ಫ್ಲಾಟ್​ನಲ್ಲಿ ನೇಣಿಗೆ ಶರಣಾಗಿದ್ದಾರೆ. ಇಂದು ಬೆಳಗ್ಗೆ ವಾಕಿಂಗ್ ಹೋಗಿ ಬಂದ ಅವತಾರ್ ಸಿಂಗ್ ಬಳಿಕ ತಮ್ಮ ರೂಂ ಸೇರಿಕೊಂಡಿದ್ದರು. ಅರಣ್ಯ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು 1 ತಿಂಗಳ ಹಿಂದಷ್ಟೇ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದರು.

ಡಿಕೆ ಶಿವಕುಮಾರ್ ಬಂಧನದ ಹಿಂದೆ ಸಿದ್ದರಾಮಯ್ಯ ಕೈವಾಡ; ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಗಂಭೀರ ಆರೋಪ

ಹರಿಯಾಣದ ಯಮುನಾನಗರ ಮೂಲದ ಅವತಾರ್ ಸಿಂಗ್ ಬೆಂಗಳೂರಿನ ಅರಣ್ಯ ಭವನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಲಾರದಿಂದ ಕೆಲಸ ಪ್ರಾರಂಭಿಸಿದ್ದ ಐಎಫ್​ಎಸ್​ ಅಧಿಕಾರಿ ಅವತಾರ್ ಸಿಂಗ್ ವಿವಿಧ ಜಿಲ್ಲೆ, ಮಂಡಳಿಗಳಲ್ಲಿ ಕೆಲಸ ಮಾಡಿದ್ದರು. ನಿನ್ನೆಯಷ್ಟೇ ಅರಣ್ಯಭವನದಲ್ಲಿ ಅಧಿಕಾರಿಗಳ ಸಭೆಯಲ್ಲಿ ಭಾಗಿಯಾಗಿದ್ದರು. ಕಳೆದ ವಾರ ಸಿಎಂ ಜೊತೆಯೂ ಸಭೆಯಲ್ಲಿ ಭಾಗಿಯಾಗಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಅದೇ ಕಾರಣಕ್ಕೆ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.

1990ರ ಬ್ಯಾಚ್​ನ ಎಕ್ಸ್​ ಕೆಡರ್ ಐಎಫ್​ಎಸ್​ ಅಧಿಕಾರಿಯಾಗಿದ್ದ ಅವತಾರ್ ಸಿಂಗ್ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಬೆಂಗಳೂರಿನಲ್ಲಿ ಹೆಚ್ಚುವರಿ ಅರಣ್ಯ ಮುಖ್ಯ ಸಂರಕ್ಷಣಾಧಿಕಾರಿಯಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು.

Comments are closed.