ರಾಷ್ಟ್ರೀಯ

4ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಉಪ ಪ್ರಿನ್ಸಿಪಲ್, ಇಬ್ಬರು ಶಿಕ್ಷಕರು

Pinterest LinkedIn Tumblr

ಧನ್ಬಾದ್: ವಿದ್ಯಾರ್ಥಿನಿಯ ಭವಿಷ್ಯವನ್ನು ಉಜ್ವಲಗೊಳಿಸಬೇಕಿದ್ದ ಉಪ ಪ್ರಿನ್ಸಿಪಲ್, ಇಬ್ಬರು ಶಿಕ್ಷಕರೇ ರಕ್ಕಸರಾಗಿ 4ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಹೀನಾ ಕೃತ್ಯ ವರದಿಯಾಗಿದೆ.

ಜಾರ್ಖಂಡ್ ನ ಧನ್ಬಾದ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಖಾಸಗಿ ಶಾಲೆಯ ವೈದ್ಯಕೀಯ ಚಿಕಿತ್ಸಾ ಕೋಣೆಯಲ್ಲಿ 4ನೇ ತರಗತಿಯ ವಿದ್ಯಾರ್ಥಿನಿ ಮೇಲೆ ಮೂವರು ಸೇರಿ ಅತ್ಯಾಚಾರ ನಡೆಸಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದು ಪೋಸ್ಕೋ ಕಾಯ್ದೆ ಅಡಿ ನಾಲ್ವರ ವಿರುದ್ಧ ದೂರು ದಾಖಲಿಸಲಾಗಿದೆ.

ವಿದ್ಯಾರ್ಥಿ ಅಸ್ವಸ್ಥಗೊಂಡಿದ್ದನ್ನು ಕಂಡ ಶಿಕ್ಷಕರು ಆಕೆಯನ್ನು ಚಿಕಿತ್ಸಾ ಕೋಣೆಗೆ ಕಳುಹಿಸಿದ್ದಾರೆ. ಅಲ್ಲಿ ನರ್ಸ್ ವಿದ್ಯಾರ್ಥಿನಿಗೆ ಚುಚ್ಚು ಮದ್ದು ನೀಡಿದ್ದಾಳೆ. ಕೂಡಲೇ ವಿದ್ಯಾರ್ಥಿನಿ ಪ್ರಜ್ಞೆ ಕಳೆದುಕೊಂಡ ಬಳಿಕ ಮೂವರು ಅತ್ಯಾಚಾರ ನಡೆಸಿದ್ದಾರೆ.

ಈ ಬಗ್ಗೆ ಸಂತ್ರಸ್ತ ವಿದ್ಯಾರ್ಥಿನಿಯಿಂದ ಹೇಳಿಕೆ ಪಡೆದಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇನ್ನು ಶಾಲೆಯ ಆಡಳಿತ ಮಂಡಳಿ ಸಹ ಪೊಲೀಸರ ತನಿಖೆಗೆ ಸಹಕರಿಸುವುದಾಗಿ ತಿಳಿಸಿದ್ದಾರೆ.

Comments are closed.