ಕರ್ನಾಟಕ

ಕಾರು ಪಲ್ಟಿ; ಒಂದೇ ಕುಟುಂಬದ ಐವರು ಸಜೀವ ದಹನ

Pinterest LinkedIn Tumblr


ಚಿತ್ತೂರು/ಬೆಂಗಳೂರು:ತಿರುಪತಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಕಾರು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬೆಂಗಳೂರು ಮೂಲದ ಐವರು ಸಜೀವ ದಹನವಾದ ದಾರುಣ ಘಟನೆ ಶನಿವಾರ ಚಿತ್ತೂರಿನ ಪಲಮನೇರು ಮಂಡಲಂ ಬಳಿ ನಡೆದಿದೆ.

ಕಾರಿನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಾಗ ಬೆಂಕಿ ಹೊತ್ತಿಕೊಂಡಿತ್ತು. ಕಾರಿನಿಂದ ಹೊರ ಬರಲಾಗದೆ ಐವರು ಸಜೀವ ದಹನವಾಗಿದ್ದರು. ಒಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿ ತಿಳಿಸಿದೆ.

ಸಾವನ್ನಪ್ಪಿದವರನ್ನು ಬೆಂಗಳೂರಿನ ಜಾಹ್ನವಿ, ರಾಮ್, ಕಲಾ, ಸಾಯಿ ಆಶ್ರೀತ್ ಹಾಗೂ ಪವನ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Comments are closed.