
ಬೆಳಗಾವಿ: ಉಪಚುನಾವಣೆಯಲ್ಲಿ ನಾನೇ ಸ್ಪರ್ಧಿಸುತ್ತೇನೆ. ಸುಪ್ರೀಂ ಕೋರ್ಟ್ ನಲ್ಲಿ ತೀರ್ಪು ನಮ್ಮ ಪರವೇ ಬರಲಿದೆ. ರಾಜೀನಾಮೆ ಕೊಟ್ಟ ದಿನದಿಂದಲೇ ನಾನು ಚುನಾವಣೆಗೆ ಸ್ಪರ್ಧಿಸಲು ಮಾನಸಿಕವಾಗಿ ಸಿದ್ದವಾಗಿದ್ದೇನೆ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯ ಚುನಾವಣಾಧಿಕಾರಿ ಸ್ಪೀಕರ್ ಆದೇಶವನ್ನು ಓದಿಕೊಂಡು ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಹೇಳಿದ್ದಾರೆ.ಆದರೆ ಅವರು ಹೇಳಿದ ಹಾಗೆ ಆಗಲು ಸಾಧ್ಯವೇ ಇಲ್ಲ ಎಂದಿದ್ದಾರೆ.
Comments are closed.