ಕರ್ನಾಟಕ

ಅಕ್ಟೋಬರ್ 2ರಿಂದ ಬಸ್, ರೈಲು ಪ್ರಯಾಣಿಕರಿಗೆ ಹೊಸ ನಿಯಮ ಜಾರಿ

Pinterest LinkedIn Tumblr

ಬೆಂಗಳೂರು: ಅಕ್ಟೋಬರ್ 2 ರ ಗಾಂಧಿಜಯಂತಿ ದಿನದಿಂದ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಒಂದು ವೇಳೆ ರೈಲು ನಿಲ್ದಾಣಕ್ಕೆ ಇಂತಹ ಪ್ಲಾಸ್ಟಿಕ್ ತಂದಲ್ಲಿ 1000 ರೂ. ವರೆಗೆ ದಂಡ ವಿಧಿಸಲಾಗುವುದು ಎಂದು ಬೆಂಗಳೂರು ವಿಭಾಗೀಯ ರೈಲ್ವೇ ವ್ಯವಸ್ಥಾಪಕರು ತಿಳಿಸಿದ್ದಾರೆ. ರೈಲು ನಿಲ್ದಾಣಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ.

ಅದೇ ರೀತಿ ಬಿಎಂಟಿಸಿ ಬಸ್ ಗಳಲ್ಲಿ ಇನ್ನು ಮುಂದೆ ಪ್ರಯಾಣಿಕರು ಪ್ಲಾಸ್ಟಿಕ್ ಕವರ್, ಪ್ಲಾಸ್ಟಿಕ್ ವಸ್ತುಗಳನ್ನು ತರುವಂತಿಲ್ಲ ಎಂದು ಬೆಂಗಳೂರು ಮಹಾನಗರ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಬಿಎಂಟಿಸಿ ಬಸ್ ಗಳಲ್ಲಿ ಪ್ಲಾಸ್ಟಿಕ್ ತರದಂತೆ ಪ್ರಯಾಣಿಕರಿಗೆ ಜಾಗೃತಿ ಮೂಡಿಸಲು ಚಾಲಕರು ಮತ್ತು ನಿರ್ವಾಹಕರಿಗೆ ಸುತ್ತೋಲೆ ಹೊರಡಿಸಲಾಗಿದೆ. ಬಸ್ ಒಳಗೆ ಪ್ಲಾಸ್ಟಿಕ್ ಕವರ್ ನಿಷೇಧಿಸಲಾಗಿದ್ದು ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಬಿಎಂಟಿಸಿ ಸಂಸ್ಥೆ ಮತ್ತು ಬೆಂಗಳೂರು ನಗರವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

Comments are closed.