
ಮಂಗಳೂರು : ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ, ರಥಬೀದಿ, ಮಂಗಳೂರು. ನವರಾತ್ರಿ ಹಬ್ಬದ ಸಲುವಾಗಿ ಗುರುವಾರ ಲಲಿತಾ ಪಂಚಮಿ ಶ್ರೀ ಚಂಡಿಕಾ ಹೋಮ ಕ್ಷೇತ್ರದಲ್ಲಿ ಪ್ರಧಾನ ಅರ್ಚಕರಾದ ಬ್ರಹ್ಮಶ್ರೀ ಧನಂಜಯ ಪುರೋಹಿತರ ನೇತೃತ್ವದಲ್ಲಿ ಜರಗಿತು.
ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಕೆ. ಕೇಶವ ಆಚಾರ್ಯ, ಎರಡನೇ ಮೊಕ್ತೇಸರ ಎಂ. ಸುಂದರ್ ಆಚಾರ್ಯ ಬೆಳುವಾಯಿ, ಮೂರನೇ ಮೊಕ್ತೇಸರ ಎ. ಲೋಕೇಶ್ ಆಚಾರ್ಯ ಬಿಜೈ, ಹಾಗೂ ಶ್ರೀ ಕ್ಷೇತ್ರದ ಆಡಳಿತ ಮಂಡಳಿ, ಜೀರ್ಣೋದ್ಧಾರ ಸಮಿತಿ, ಶ್ರೀ ಕಾಳಿಕಾಂಬಾ ಸೇವಾ ಸಮಿತಿ, ವಿಶ್ವಬ್ರಾಹ್ಮಣ ಮಹಿಳಾ ಸಮಿತಿ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.
Comments are closed.