ಕರ್ನಾಟಕ

ಅನರ್ಹ ಶಾಸಕರ ಕುರಿತು ಲಕ್ಷ್ಮಣ ಸವದಿ ಹೇಳಿಕೆಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಆಕ್ರೋಶ

Pinterest LinkedIn Tumblr


ದಾವಣಗೆರೆ(ಅ. 27): ಅನರ್ಹ ಶಾಸಕರ ವಿಚಾರವಾಗಿ ಕೆಲವಾರು ವಿವಾದಾತ್ಮಕ ಹೇಳಿಕೆ ನೀಡಿದ್ದ ಡಿಸಿಎಂ ಲಕ್ಷ್ಮಣ ಸವದಿ ವಿರುದ್ಧ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಸಿಡಿದೆದಿದ್ದಾರೆ. ಇಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಅವರು, ಲಕ್ಷ್ಮಣ ಸವದಿ ಅವರದ್ದು ದುರಹಂಕಾರದ ಪರಮಾವಧಿ ಟೀಕಿಸಿದ್ದಾರೆ.

ದೇಶದ ಇತಿಹಾಸದಲ್ಲಿ ಚುನಾವಣೆಯಲ್ಲಿ ಸೋತವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಸಿಕ್ಕಿದೆ. ಇದನ್ನು ಮೊದಲು ಅವರು ತಿಳಿದುಕೊಳ್ಳಲಲಿ. ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಯಲ್ಲಿ ಕೊಡೆ ಹಿಡಿದುಕೊಂಡ ಪರಿಸ್ಥಿತಿ ಅವರದ್ದಾಗಿದೆ ಎಂದು ಮಾಜಿ ಸಚಿವರೂ ಆಗಿರುವ ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಪಚುನಾವಣೆ ಮುಗಿದ ನಂತರ ಅವರ ಅಸ್ತಿತ್ವ ಏನು ಎಂಬುದನ್ನು ಮೊದಲು ಅವರು ಅರಿತುಕೊಳ್ಳಲಿ. ಪಕ್ಷಕ್ಕೆ ಹಾನಿ ಮಾಡುವ ಹೇಳಿಕೆ ನೀಡುವುದು ಸರಿಯಲ್ಲ. ಈ ಬಗ್ಗೆ ಯಡಿಯೂರಪ್ಪನವರೊಂದಿಗೆ ಮಾತನಾಡುತ್ತೇನೆ. ಪ್ರಧಾನಿ ಹಾಗೂ ಅಮಿತ್ ಶಾ ಅವರಿಗೆ ಪತ್ರ ಬರೆಯುತ್ತೇನೆ ಎಂದು ತಿಳಿಸಿದ್ದಾರೆ.

ಅನರ್ಹ ಶಾಸಕರು ಬಿಜೆಪಿಗೆ ಬರುತ್ತೇವೆಂದು ಇನ್ನೂ ಹೇಳಿಲ್ಲ. ಅವರು ಬರುತ್ತೇವೆ ಎಂದರೆ ವರಿಷ್ಠರು ತೀರ್ಮಾನ ಮಾಡುತ್ತಾರೆ. ಅವರಿಗೆ ಟಿಕೆಟ್ ನೀಡುವುದು ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಎಂ.ಪಿ. ರೇಣುಕಾಚಾರ್ಯ ಸ್ಪಷ್ಟಪಡಿಸಿದ್ದಾರೆ.

ಡಿಕೆಶಿಗೆ ಯಾಕಿಷ್ಟು ಭವ್ಯ ಮೆರವಣಿಗೆ?

ತಿಹಾರ್ ಜೈಲಿನಿಂದ ಬಿಡುಗಡೆಯಾಗಿ ನಿನ್ನೆ ರಾಜ್ಯ ಆಗಮಿಸಿದ ಡಿಕೆ ಶಿವಕುಮಾರ್ ಅವರಿಗೆ ಅದ್ಧೂರಿ ಸ್ವಾಗತ ನೀಡಿರುವುದಕ್ಕೆ ರೇಣುಕಾಚಾರ್ಯ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಡಿಕೆಶಿ ಏನು ಸಾಧನೆ ಮಾಡಿದ್ದಾರೆಂದು ಅವರ ಮೆರವಣಿಗೆ ಮಾಡಿದ್ರಿ? ಕ್ರಿಕೆಟ್ ಗೆದ್ದು ಬಂದಿದ್ದಾರಾ? ಅಥವಾ ಯುದ್ಧ ಗೆದ್ದು ಬಂದಿದ್ದಾರಾ ಎಂದು ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಕಾಂಗ್ರೆಸ್​ನ ಸಾಕಷ್ಟು ಜನರು ಜೈಲಿಗೆ ಹೋಗಿ ಬಂದಿದ್ದಾರೆ. ಇನ್ನೂ ಹೋಗುತ್ತಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಕುಟುಕಿದ್ಧಾರೆ.

Comments are closed.