ಕರ್ನಾಟಕ

ಟಿಪ್ಪು ಜಯಂತಿ ಆಚರಣೆ ನಿಲ್ಲಿಸಲು ನಿರ್ಧಾರ; ಪಠ್ಯದಿಂದಲೂ ಟಿಪ್ಪುವಿಗೆ ಕೊಕ್?

Pinterest LinkedIn Tumblr


ಬೆಂಗಳೂರು: ಕಳೆದ ಕೆಲವು ವರ್ಷಗಳಿಂದ ವಿವಾದದ ಕೇಂದ್ರವಾಗಿದ್ದ ಟಿಪ್ಪುಜಯಂತಿ ಆಚರಣೆಯನ್ನು ನಿಲ್ಲಿಸಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನಿರ್ಧರಿಸಿದ್ದಾರೆ. ಬೆಂಗಳೂರು ಪ್ರೆಸ್ ಕ್ಲಬ್ ಏರ್ಪಡಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಬಿಎಸ್.ವೈ ಅವರು ಈ ವಿಚಾರವನ್ನು ಖಚಿತಪಡಿಸಿದ್ದಾರೆ.

ಆದರೆ ಪಠ್ಯಪುಸ್ತಕದಿಂದ ಟಿಪ್ಪು ಪಠ್ಯವನ್ನು ತೆಗೆಯುವ ಕುರಿತಾಗಿ ಪರಿಶೀಲಿಸಿ ನಿರ್ಧಾರವನ್ನು ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. ಟಿಪ್ಪು ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಈ ಹಿಂದಿನ ಸರಕಾರ ಹೊರಡಿಸಿರುವ ಎಲ್ಲಾ ಆದೇಶಗಳನ್ನು ವಾಪಾಸು ಪಡೆಯುತ್ತಿರುವುದಾಗಿ ಮುಖ್ಯಮಂತ್ರಿಯವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಬಿಜೆಪಿ ಶಾಸಕರಾದ ಕೆ.ಜಿ.ಬೋಪಯ್ಯ ಹಾಗೂ ಅಪ್ಪಚ್ಚು ರಂಜನ್ ಅವರು ಶಾಲಾ ಪಠ್ಯದಿಂದ ಟಿಪ್ಪುವಿನ ಕುರಿತಾಗಿರುವ ಪಠ್ಯಗಳನ್ನು ತೆಗೆದುಹಾಕಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಮನವಿಪತ್ರ ಸಲ್ಲಿಸಿದ್ದರು.

ಟಿಪ್ಪು ಸುಲ್ತಾನ್ ಪಠ್ಯದ ಕುರಿತು ಇತಿಹಾಸ ಪಠ್ಯಪುಸ್ತಕ ರಚನಾ ಸಮಿತಿ ಸಭೆಯನ್ನು ಕರೆದು ಆ ಸಭೆಗೆ ಶಾಸಕರಾದ ಬೋಪಯ್ಯ ಹಾಗೂ ಅಪ್ಪಚ್ಚು ರಂಜನ್ ಅವರನ್ನು ಆಹ್ವಾನಿಸಿ ಅಲ್ಲಿ ಟಿಪ್ಪು ಪಠ್ಯದ ಅಗತ್ಯತೆ ಕುರಿತಾಗಿ ಚರ್ಚಿಸುವಂತೆ ಸಚಿವ ಸುರೇಶ್ ಕುಮಾರ್ ಅವರು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನವನ್ನು ನೀಡಿದ್ದಾರೆ.

Comments are closed.