ಮುಂಬೈ

ಮಹಾರಾಷ್ಟ್ರದ ಥಾಣೆಯಲ್ಲಿ ರಸ್ತೆ ಅಪಘಾತಕ್ಕೆ ಖ್ಯಾತ ಗಾಯಕಿ ದುರ್ಮರಣ

Pinterest LinkedIn Tumblr


ಮುಂಬೈ: ಮಹಾರಾಷ್ಟ್ರದ ಥಾಣೆಯಲ್ಲಿ ಗುರುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಖ್ಯಾತ ಗಾಯಕಿಯೋರ್ವರು ಮೃತಪಟ್ಟಿದ್ದಾರೆ.

ಮರಾಠಿ ಚಿತ್ರರಂಗದ ಖ್ಯಾತ ಹಿನ್ನಲೆ ಗಾಯಕಿ ಗೀತಾ ಮಲಿ ಅಪಘಾತದಲ್ಲಿ ಮೃತಪಟ್ಟದ್ದಾರೆ.

ಅಮೇರಿಕಾದಿಂದ ಗುರುವಾರ ಬಂದಿದ್ದ ಗೀತಾ ನಾಸಿಕ್ ನಲ್ಲಿರುವ ತಮ್ಮ ಮನೆಗೆ ಪ್ರಯಾಣಿಸುತ್ತಿದ್ದರು.

ಮುಂಬೈ – ಆಗ್ರಾ ಹೆದ್ದಾರಿಯಲ್ಲಿ ತಮ್ಮ ಕಾರಿನಲ್ಲಿ ಪ್ರಯಾಣ ಮಾಡುವ ವೇಳೆ ರಸ್ತೆ ಬದಿ ನಿಲ್ಲಿಸಿದ್ದ ಕಂಟೈನರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಭೀಕರವಾಗಿದ್ದು, ಗೀತಾ ಮೃತರಾಗಿದ್ದಾರೆ ಎಂದು ವರದಿಯಾಗಿದೆ. ಕಾರಿನಲ್ಲಿದ್ದ ಆಕೆಯ ಪತಿ ವಿಜಯ್ ಕೂಡಾ ಗಂಭೀರ ಗಾಯಗೊಂಡಿದ್ಧಾರೆ.

Comments are closed.