
ಮುಂಬೈ: ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವೀಸ್ ನೇತೃತ್ವದ ಬಿಜೆಪಿ ಸರಕಾರಕ್ಕೆ ಬೆಂಬಲ ನೀಡಿದ ಕಾರಣಕ್ಕೆ ಎನ್ ಸಿಪಿ ಪಕ್ಷದ ಶಾಸಕಾಂಗ ನಾಯಕತ್ವದಿಂದ ಅಜಿತ್ ಪವಾರ್ ಅವರನ್ನು ವಜಾ ಮಾಡಲಾಗಿದೆ.
ಅಜಿತ್ ಪವಾರ್ ಅವರು ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರ ಬೆಂಬಲವಿಲ್ಲದೆ ಕೆಲ ಶಾಸಕರೊಂದಿಗೆ ಬಿಜೆಪಿಗೆ ಬೆಂಬಲ ನೀಡಿದ್ದರು. ಇದರಿಂದಾಗಿ ಇಂದು ಬೆಳಿಗ್ಗೆ ಬಿಜೆಪಿ ಸರಕಾರವನ್ನೂ ರಚಿಸಿತ್ತು.
ಇಂದು ಮುಂಜಾನೆ ನಡೆದ ಕಾರ್ಯಕ್ರಮದಲ್ಲಿ ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿಯಾಗಿ ಮತ್ತು ಅಜಿತ್ ಪವಾರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
Comments are closed.