ಮಂಗಳೂರು ನವೆಂಬರ್ 23 : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷ ದಯಾನಂದ ಜಿ. ಕತ್ತಲ್ಸಾರ್ ಹಾಗೂ ಸದಸ್ಯರು ನವೆಂಬರ್ 24ರಂದು ಮಧ್ಯಾಹ್ನ 3 ಗಂಟೆಗೆ ತುಳುಭವನದ ಸಿರಿಚಾವಡಿಯಲ್ಲಿ ಪದಸ್ವೀಕಾರ ಮಾಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಕಲಾಕುಂಭ ಸಾಂಸ್ಕೃತಿಕ ವೇದಿಕೆ ಕುಳಾಯಿ ಇವರಿಂದ ‘ತುಳುನಾಡ ಸಂಸ್ಕೃತಿಕ’ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಪರಿಷತ್ನ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ, ಮುಜರಾಯಿ, ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ದ.ಕ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ದ.ಕ ಜಿಲ್ಲಾ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್, ಮಂಗಳೂರು ನಗರ ಶಾಸಕ ಯು. ಟಿ. ಖಾದರ್, ಮಂಗಳೂರು ಉತ್ತರ ಶಾಸಕ ಡಾ ಭರತ್ ಶೆಟ್ಟಿ ವೈ, ಕರ್ನಾಟಕ ವಿಧಾನಪರಿಷತ್ ಶಾಸಕ ಐವನ್ ಡಿ’ಸೋಜಾ, ಆಗಮಿಸಲಿದ್ದಾರೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮುಂದಿನ 3 ವರ್ಷದ ಅವಧಿಗೆ ಕರ್ನಾಟಕ ಸರಕಾರದ ಆದೇಶದಂತೆ ನೇಮಕ ಮಾಡಿದವರ ವಿವರ ಇಂತಿವೆ :
ಅಧ್ಯಕ್ಷ- ದಯಾನಂದ ಜಿ. ಕತ್ತಲ್ಸಾರ್, ಸದಸ್ಯರು- ರವೀಂದ್ರ ಶೆಟ್ಟಿ ಬಳಂಜ, ನಾಗೇಶ್ ಕುಲಾಲ್, ವಿಜಯಲಕ್ಷ್ಮೀ ಪಿ ರೈ, ಸಿದ್ಧಕಟ್ಟೆ ಮಲ್ಲಿಕಾ ಅಜಿತ್ ಶೆಟ್ಟಿ, ಕಡಬ ದಿನೇಶ್ ರೈ, ನಿಟ್ಟೆ ಶಶಿಧರ ಶೆಟ್ಟಿ, ಡಾ. ಆಕಾಶ್ರಾಜ್ ಜೈನ್, ಕಾಂತಿ ಶೆಟ್ಟಿ, ತಾರಾ ಉಮೇಶ್ ಆಚಾರ್ಯ. ಲೀಲಾಕ್ಷ ಕರ್ಕೇರ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ರಾಜೇಶ್. ಜಿ ಇವರ ಪ್ರಕಟಣೆ ತಿಳಿಸಿದೆ.

Comments are closed.