ಮುಂಬೈ: ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ದೇವೇಂದ್ರ ಫಡ್ನವೀಸ್ ಅವರು ಶನಿವಾರ ಪ್ರತಿಪಕ್ಷಗಳು ಬೆಚ್ಚಿಬೀಳುವಂತೆ 2ನೇ ಬಾರಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರಿದಿರುವ ನಡುವೆಯೇ ಫಡ್ನವೀಸ್ 2ನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಸೋಮವಾರ ಮೊದಲ ಚೆಕ್ ಗೆ ಸಹಿ ಹಾಕುವ ಮೂಲಕ ಕೆಲಸ ಆರಂಭಿಸಿರುವುದಾಗಿ ವರದಿ ತಿಳಿಸಿದೆ.
ರಾಜಕೀಯ ಗೊಂದಲದ ನಡುವೆಯೇ ಇಂದು ಮುಖ್ಯಮಂತ್ರಿ ಸಚಿವಾಲಯಕ್ಕೆ ಆಗಮಿಸಿದ ಫಡ್ನವೀಸ್ ಅವರು ಮುಖ್ಯಮಂತ್ರಿ ಪರಿಹಾರ ನಿಧಿ ಚೆಕ್ ಗೆ ಸಹಿ ಹಾಕಿದ್ದಾರೆ. 2ನೇ ಅವಧಿಗೆ ನೂತನವಾಗಿ ಆಯ್ಕೆಯಾದ ಮುಖ್ಯಮಂತ್ರಿ ಫಡ್ನವೀಸ್ ಈ ಚೆಕ್ ಅನ್ನು ಮಹಿಳೆಯೊಬ್ಬರಿಗೆ ಹಸ್ತಾಂತರಿಸಿರುವುದಾಗಿ ವರದಿ ವಿವರಿಸಿದೆ.
2ನೇ ಅವಧಿಯಲ್ಲಿ ಸಿಎಂ ದೇವೇಂದ್ರ ಫಡ್ನವೀಸ್ ಅವರು ಸಿಎಂ ರಿಲೀಫ್ ಫಂಡ್ ಚೆಕ್ ಗೆ ಮೊದಲ ಸಹಿ ಹಾಕಿದ್ದು, ಅದನ್ನು ಕುಸುಮ್ ವೆಂಗುರ್ಲೆಕರ್ ಎಂಬಾಕೆಗೆ ಹಸ್ತಾಂತರಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಟ್ವೀಟ್ ಮಾಡಿದೆ.


Comments are closed.