ಬೆಂಗಳೂರು: ರಾಜ್ಯಪಾಲ ವಜುಬಾಯಿ ವಾಲಾ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎನ್ನಲಾಗಿದೆ.
ನವೆಂಬರ್ ಮೊದಲ ವಾರದಲ್ಲಿ ಅವರು ಆಂಜಿಯೋಗ್ರಾಂ ಪರೀಕ್ಷೆಗೆ ಒಳಪಟ್ಟಿದ್ದರು. ಅಂದಿನಿಂದಲೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದರಿಂದ ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ವೈದ್ಯರು ತೆರೆದ ಹೃದಯ ಶಸ್ತ್ರಚಿಕಿತ್ಸೆ ಮಾಡಬೇಕು ಎಂದು ವಜುಬಾಯಿ ವಾಲಾ ಅವರಿಗೆ ತಿಳಿಸಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.
ಅನಾರೋಗ್ಯ ಕಾರಣದಿಂದ ನವೆಂಬರ್ 23, 24ರಂದು ದೆಹಲಿಯಲ್ಲಿ ನಡೆದ ರಾಜ್ಯಪಾಲರ ಸಮಾವೇಶದಲ್ಲೂ ವಜುಬಾಯಿ ವಾಲಾ ಪಾಲ್ಗೊಂಡಿರಲಿಲ್ಲ.

Comments are closed.