ರಾಷ್ಟ್ರೀಯ

ಕಾದು ಕುಳಿತು ಪಶುವೈದ್ಯೆ ಪ್ರಿಯಾಂಕ ರೆಡ್ಡಿಯನ್ನು ಅತ್ಯಾಚಾರ ಮಾಡಿ ಸುಟ್ಟು ಕೊಂದರೇ ಆ ನಾಲ್ವರು!?

Pinterest LinkedIn Tumblr


ಹೈದರಾಬಾದ್: ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಅವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರಾಬಾದ್ ಪೊಲೀಸರಿಗೆ ಮಹತ್ವದ ಸುಳಿವು ಲಭ್ಯವಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಂದು ನಾಲ್ವರನ್ನು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಸ್ಥಳದಲ್ಲಿದ್ದ ಸಿಸಿಟಿವಿ ಫೂಟೇಜ್ ಗಳು ಮತ್ತು ಕೆಲವೊಂದು ತಾಂತ್ರಿಕ ಪುರಾವೆಗಳ ಆಧಾರದಲ್ಲಿ ಓರ್ವ ಟ್ರಕ್ ಚಾಲಕ, ಆತನ ಸಹಾಯಕ ಮತ್ತು ಇನ್ನಿಬ್ಬರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಪ್ರಿಯಾಂಕ ರೆಡ್ಡಿ ಅವರು ಪ್ರತೀದಿನ ಟೋಲ್ ಪ್ಲಾಝಾ ಬಳಿ ತಮ್ಮ ಸ್ಕೂಟರ್ ನಿಲ್ಲಿಸಿ ಬಳಿಕ ಅಲ್ಲಿಂದ ಕ್ಯಾಬ್ ಮೂಲಕ ತನ್ನ ಕ್ಲಿನಿಕ್ ಗೆ ತೆರಳುತ್ತಿದ್ದರು. ಬುಧವಾರವೂ ಅವರು ಇದೇ ರೀತಿಯಲ್ಲಿ ಸ್ಕೂಟರ್ ನಿಲ್ಲಿಸಿ ತೆರಳುವುದನ್ನು ಗಮನಿಸಿದ ದುಷ್ಕರ್ಮಿಗಳು ಆಕೆಯ ಸ್ಕೂಟರ್ ಚಕ್ರದ ಗಾಳಿಯನ್ನು ಉದ್ದೇಶಪೂರ್ವಕವಾಗಿಯೇ ತೆಗೆದಿದ್ದಾರೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.

ಬಳಿಕ ಬುಧವಾರ ರಾತ್ರಿ 8 ಗಂಟೆಗೆ ಪ್ರಿಯಾಂಕ ಅವರು ವಾಪಸ್ಸಾಗಿ ತಮ್ಮ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಇಬ್ಬರು ಪಂಕ್ಚರ್ ಹಾಕಿಸುವುದಾಗಿ ಪಡೆದುಕೊಂಡು ಹೋಗಿದ್ದಾರೆ ಇದೇ ಸಂದರ್ಭದಲ್ಲಿ ಇನ್ನಿಬ್ಬರು ಆಕೆಯನ್ನು ಬಲವಂತಾಗಿ ಪೊದೆಗೆ ಎಳೆದೊಯ್ದು ಅವರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ ಎಂಬ ಶಂಕೆಯನ್ನು ತನಿಖೇ ನಡೆಸುತ್ತಿರುವ ಪೊಲೀಸರು ಇದೀಗ ಬಲವಾಗಿ ವ್ಯಕ್ತಪಡಿಸಿದ್ದಾರೆ.

Comments are closed.