
ರಾಂಚಿ: ಜಾರ್ಖಂಡ್‍ನಲ್ಲಿ ಕಾನೂನು ವಿದ್ಯಾರ್ಥಿನಿಗೆ ಗನ್ ತೋರಿಸಿ ಸಾಮೂಹಿಕ ಅತ್ಯಾಚಾರ ಮಾಡಿ, ಪರಾರಿಯಾಗಿದ್ದ 12 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನವೆಂಬರ್ 26 ರಂದು ಸಂಜೆ 5.30 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ರಾಂಚಿಯ ಸಂಗ್ರಾಮಪುರದ ಬಳಿ ವಿದ್ಯಾರ್ಥಿನಿ ತನ್ನ ಸ್ನೇಹಿತನ ಜೊತೆ ತೆರೆಳಿದ್ದಳು. ಈ ವೇಳೆ ಆರೋಪಿಗಳ ಗುಂಪು ವಿದ್ಯಾರ್ಥಿನಿ ಹಾಗೂ ಆಕೆಯ ಸ್ನೇಹಿತನನ್ನು ಅಡ್ಡಗಟ್ಟಿದ್ದರು. ಬಳಿಕ ಸ್ನೇಹಿತನನ್ನು ಕೆಲವರು ಹಿಡಿದುಕೊಂಡು ಹಲ್ಲೆ ನಡೆಸಿ, ವಿದ್ಯಾರ್ಥಿನಿಗೆ ಗನ್ ತೋರಿಸಿ ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸೆಗಿದ್ದರು.
ಈ ಸಂಬಂಧ ವಿದ್ಯಾರ್ಥಿನಿ ಹಾಗೂ ಆಕೆಯ ಕುಟುಂಬ ಕಾಂಕೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಕುರಿತು ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದರು. ವಿದ್ಯಾರ್ಥಿನಿ ದೂರಿನ ಆಧಾರದ ಮೇಲೆ ಪೊಲೀಸ್ ವರಿಷ್ಠಾಧಿಕಾರಿ(ಗ್ರಾಮೀಣ) ರಿಷಭ್ ಕುಮಾರ್ ಜಾ ನೇತೃತ್ವದಲ್ಲಿ ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸಲಾಗಿದೆ.
ಐಪಿಸಿ ಸೆಕ್ಷನ್, ಎಸ್‍ಸಿ ಮತ್ತು ಎಸ್‍ಟಿ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಒಟ್ಟು 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ ಆರೋಪಿಗಳ ಬಳಿಯಿದ್ದ ಕಾರು, ಬೈಕ್, 2 ಗನ್, 8 ಮೊಬೈಲ್ ಫೋನ್ ಹಾಗೂ ಸಂತ್ರಸ್ತೆಯ ಬಳಿ ದೋಚಿದ್ದ ಫೋನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Comments are closed.