ಕರಾವಳಿ

ಡಿ.01: ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿಯವರಿಂದ ಮಂಗಳೂರಿನಲ್ಲಿ ಧರ್ಮ ಜಾಗೃತಿ ಅಭಿಯಾನ

Pinterest LinkedIn Tumblr

ಮಂಗಳೂರು : ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ ಮಂಗಳೂರು ಇದರ ವತಿಯಿಂದ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠಾಧಿಪತಿ ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಯವರಿಂದ ಗುರುಸ್ಪಂದನ (ಮನೆ ಮನೆ ಭೇಟಿ ) ಧರ್ಮ ಜಾಗೃತಿ ಅಭಿಯಾನ ಕಾರ್ಯಕ್ರಮ ಮಂಗಳೂರಿನ ಬೋಳೂರು – ಮಠದ ಕಣಿ ಪರಿಸರದಲ್ಲಿ ಇರುವ ವಿಶ್ವಬ್ರಾಹ್ಮಣ ಸಮಾಜ ಬಾಂಧವರ ಮನೆಗಳಲ್ಲಿ 1-12-2019 ಬೆಳಿಗ್ಗೆಯಿಂದ ಸಂಜೆ ತನಕ ನಡೆಯಲಿದೆ.

ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಾಗೂ ಮನೆ ಮನೆ ಭೇಟಿಗೆ ತೆರಳಲು 01-12-2019 ಬೆಳಿಗ್ಗೆ 08:30ಕ್ಕೆ ಭಕ್ತಾದಿಗಳು ಶ್ರೀ ಕ್ಷೇತ್ರದಲ್ಲಿ ಉಪಸ್ಥಿತರಿರುವಂತೆ ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ಕೆ. ಕೇಶವ ಆಚಾರ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.