ಮುಂಬೈ

ಮಹಾರಾಷ್ಟ್ರ ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ನಾಳೆ ಚುನಾವಣೆ

Pinterest LinkedIn Tumblr

ಮುಂಬೈ(ಪಿಟಿಐ): ಮಹಾರಾಷ್ಟ್ರ ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ನಾಳೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಹಿರಿಯ ಶಾಸಕ ನಾನಾ ಪಟೋಲೆ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಪಟೋಲೆ ವಿದರ್ಭ ಜಿಲ್ಲೆ ಸಕೋಳಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದು, ಪಕ್ಷದ ಹಿರಿಯ ಧುರೀಣರಾಗಿದ್ದಾರೆ.

ನಾಳೆ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಪಟೋಲೆ ನಮ್ಮ ಪಕ್ಷದ ಅಭ್ಯರ್ಥಿಯಾಗಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ. ನಾಳೆಯ ವಿಶೇಷ ಅಧಿವೇಶನದಲ್ಲೇ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಹೆಸರನ್ನು ನೂತನ ಸ್ಪೀಕರ್ ಘೋಷಿಸುವರು.

Comments are closed.