
ಚಿಕ್ಕಬಳ್ಳಾಪುರ: ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಂದ ಜನಾದೇಶವೇ ಉಪ ಚುನಾವಣೆಯಲ್ಲಿ ಮರುಕಳಿಸಲಿದೆ ಎಂದು ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ತಿಳಿಸಿದರು.
ಚಿಕ್ಕಬಳ್ಳಾಪುರ ನಗರದಲ್ಲಿ ಭಾನುವಾರ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಸುಭದ್ರ ಹಾಗೂ ಸ್ಥಿರ ಸರ್ಕಾರಕ್ಕಾಗಿ ಬಿಜೆಪಿಗೆ ರಾಜ್ಯದ ಜನತೆ ಬೆಂಬಲಿಸಲಿದ್ದಾರೆಂದರು.
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯದ ಎಲ್ಲೆಡೆ ಸುತ್ತಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ಜನಪರ ಕಾರ್ಯಕ್ರಮಗಳು ಮತದಾರರ ಮೇಲೆ ವಿಶ್ವಾಸ ಹೊಂದಿವೆ ಎಂದರು. ಯಾವುದೇ ಕಾರಣಕ್ಕೂ ಉಪ ಚುನಾವಣೆಯ ಬಳಿಕ ರಾಜ್ಯದಲ್ಲಿ ಸರ್ಕಾರ ಬದಲಾಗಲ್ಲ. ಮೂರುವರೆ ವರ್ಷ ಯಡಿಯೂರಪ್ಪ ಸರ್ಕಾರ ಮುಂದುವರೆಯಲಿದೆ ಎಂದರು.
ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಮಾತನಾಡಿ, ಅಧಿಕಾರ ಇಲ್ಲದಿದ್ದಕ್ಕೆ ಡಿ.ಕೆ.ಶಿವಕುಮಾರ್ ಮತಿಭ್ರಮಣೆ ಆಗಿದೆ ಎಂದರು. ರಾಜ್ಯದ 15 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆಂದರು.
ಈ ಸಂದರ್ಭದಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್, ಬೋವಿ ಸಮಾಜದ ಜಿಲ್ಲಾಧ್ಯಕ್ಷ ಗಾವಿಗಾನಹಳ್ಳಿ ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.
Comments are closed.