ಮಂಗಳೂರು : ಮಹಿಳೆಯರ ಮೇಲಿನ ದೌರ್ಜನ್ಯದಿಂದ ಭಾರತವು ಅಂತಾರಾಷ್ಟ್ರೀಯ ಮಟ್ಟದಲ್ಲಿ ತಲೆತಗ್ಗಿಸುತ್ತಿದೆ. ಬಾಲಕಿಯರು, ಯುವತಿಯರು, ಮಹಿಳೆಯರ ಬದುಕು ಅತಂತ್ರವಾಗಿದೆ ಎಂದು ವಿಮ್ ರಾಜ್ಯ ಸಮಿತಿ ಸದಸ್ಯೆ ಆಯಿಶಾ ಬಜ್ಪೆ ಹೇಳಿದರು.
ದೇಶಾದ್ಯಂತ ಮಹಿಳೆಯರ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯವನ್ನು ಖಂಡಿಸಿ ವುಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ದ.ಕ. ಜಿಲ್ಲಾ ಸಮಿತಿಯ ವತಿಯಿಂದ ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.
ವಿಮ್ ಜಿಲ್ಲಾ ಕಾರ್ಯದರ್ಶಿ ರುಬಿಯಾ ಮಾತನಾಡಿ, ದೇಶದ ಮಹಿಳೆಯರ ಭದ್ರತೆಗೆ ಸರಕಾರ ವಿಶೇಷ ಆದ್ಯತೆ ನೀಡಬೇಕು. ಅತ್ಯಾಚಾರದ ಬಗ್ಗೆ ತ್ವರಿತ ತನಿಖೆ ನಡೆಸಿ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಅಶ್ಲೀಲ ಜಾಲತಾಣಗಳು, ಸಿನೆಮಾಗಳು, ಅಮಲು ಪದಾರ್ಥ ಮತ್ತು ಮಾದಕ ದ್ರವ್ಯಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಆಗ್ರಹಿಸಿದರು.
ಸಫಿಯಾ ಬೆಂಗರೆ, ಮರಿಯಮ್ಮ ಬೆಳ್ತಂಗಡಿ, ಝಹನಾ ಬಂಟ್ವಾಳ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.




Comments are closed.