ಕರಾವಳಿ

ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ಮಂಗಳೂರಿನಲ್ಲಿ ವಿಧ್ಯಾರ್ಥಿಗಳಿಂದ ಜಾಗೃತಿ ಜಾಥ

Pinterest LinkedIn Tumblr

ಮಂಗಳೂರು ಡಿಸೆಂಬರ್ 06 : ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧೀಕಾರ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಫಾದರ್ ಮುಲ್ಲರ್ ವೈದ್ಯಕೀಯ ಮಹಾವಿದ್ಯಾಲಯ, ಸ್ವಯಂ ಸೇವಾ ಸಂಘ ಸಂಸ್ಥೆಗಳು, ಎನ್ ಎಸ್ ಎಸ್ ಘಟಕಗಳ ರೆಡ್‍ರಿಬ್ಬನ್ ಕ್ಲಬ್‍ಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಶುಕ್ರವಾರ ಏಡ್ಸ್ ಜಾಗೃತಿ ಜಾಥಾ ಮತ್ತು ವಿಶ್ವ ಏಡ್ಸ್ ದಿನ ಕಾರ್ಯಕ್ರಮ ಫಾದರ್ ಮುಲ್ಲರ್ ವೈದ್ಯಕೀಯ ಮಹಾವಿದ್ಯಾಲಯ ಸಭಾಂಗಣದಲ್ಲಿ ನಡೆಯಿತು.

ವಿಶ್ವ ಏಡ್ಸ್ ದಿನಾಚರಣೆಯ ಅಂಗವಾಗಿ ಇಂದು ಬೆಳಿಗ್ಗೆ ಮಂಗಳೂರಿನ ಬಲ್ಮಠ ಶಾಂತಿ ನಿಲಯ ಚರ್ಚ್ ಬಳಿಯ ಮೈದಾನದಿಂದ ಕಂಕನಾಡಿ ಫಾದರಮುಲ್ಲರ್ಸ ಆಸ್ಪತ್ರೆಯವರೆಗೆ ವಿಧ್ಯಾರ್ಥಿಗಳಿಂದ ಜಾಗೃತಿ ಜಾಥ ನಡೆಯಿತು. ದ.ಕ.ಜಿಲ್ಲಾ ಆರೋಗ್ಯಧಿಕಾರಿ ( ಡಿ.ಎಚ್.ಓ) ರಾಮಕೃಷ್ಣ ಅವರು ಜಾಥಾಕ್ಕೆ ಚಾಲನೆ ನೀಡಿದರು. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.