ರಾಷ್ಟ್ರೀಯ

ಲಾಲು ಪ್ರಸಾದ್ ಯಾದವ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

Pinterest LinkedIn Tumblr


ನವದೆಹಲಿ:ಬಹುಕೋಟಿ ಮೇವು ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಶಿಕ್ಷೆ ಅನುಭವಿಸುತ್ತಿರುವ ರಾಷ್ಟ್ರೀಯ ಜನತಾ ಪಕ್ಷ(ಆರ್ ಜೆಡಿ)ದ ಮುಖ್ಯಸ್ಥ, ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಜಾಮೀನು ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ವಜಾಗೊಳಿಸಿದೆ.

ಈ ನಿಟ್ಟಿನಲ್ಲಿ ಬಹುಕೋಟಿ ಮೇವು ಹಗರಣದಲ್ಲಿ ಲಾಲು ಪ್ರಸಾದ್ ಯಾದವ್ ಭಾರತೀಯ ದಂಡ ಸಂಹಿತೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಏಳು ವರ್ಷಗಳ ಕಾಲ ಜೈಲುಶಿಕ್ಷೆ ಅನುಭವಿಸಬೇಕಾಗಿದೆ.

ಅನಾರೋಗ್ಯ ಹಾಗೂ ವಯಸ್ಸಿನ ಹಿನ್ನೆಲೆಯಲ್ಲಿ ತನಗೆ ಜಾಮೀನು ನೀಡಬೇಕೆಂದು ಕೋರಿ ಲಾಲು ಪ್ರಸಾದ್ ಹೈಕೋರ್ಟ್ ಮೊರೆ ಹೋಗಿರುವುದಾಗಿ ವರದಿ ತಿಳಿಸಿದೆ. ಈಗಾಗಲೇ ಹಲವು ಮೇವು ಹಗರಣದಲ್ಲಿ ಲಾಲು ದೋಷಿಯಾಗಿದ್ದು, ದಿಯೋಗಢ್ ಖಜಾನೆ ಪ್ರಕರಣದಲ್ಲಿ ಈ ಮೊದಲು ಜಾಮೀನು ಪಡೆದಿರುವುದಾಗಿ ವರದಿ ವಿವರಿಸಿದೆ.

ತಮ್ಮ ಕಕ್ಷಿದಾರ ಈಗಾಗಲೇ ಅವರಿಗೆ ವಿಧಿಸಿರುವ ಶಿಕ್ಷೆಯಲ್ಲಿ ಬಹುತೇಕ ಜೈಲುವಾಸ ಅನುಭವಿಸಿದ್ದಾರೆ. ಹೀಗಾಗಿ ಲಾಲು ಪ್ರಸಾದ್ ಯಾದವ್ ಗೆ ಜಾಮೀನು ನೀಡಬೇಕೆಂದು ಲಾಲು ಪರ ವಕೀಲರು ಹೈಕೋರ್ಟ್ ನಲ್ಲಿ ವಾದ ಮಂಡಿಸಿದ್ದರು. ಡಿಸೆಂಬರ್ 3ರಂದು ನಡೆದ ರಾಷ್ಟ್ರೀಯ ಜನತಾ ದಳದ ಸಭೆಯಲ್ಲಿ ಲಾಲುವನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಪುನರಾಯ್ಕೆ ಮಾಡಿದ್ದರು.

Comments are closed.