
ನವದೆಹಲಿ: ಕೇಂದ್ರ ಸರ್ಕಾರ ಮಂಡಿಸಿರುವ ಪೌರತ್ವ ತಿದ್ದುಪಡಿ ಮಸೂದೆಗೆ ವಿಪಕ್ಷಗಳಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಇದರ ವಿರುದ್ಧ ಈಗಾಗಲೇ ಈಶಾನ್ಯ ರಾಜ್ಯಗಳ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ.
ಇನ್ನು ಈ ಕುರಿತು ಮಾತನಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಮಸೂದೆಯಿಂದ ಭಾರತದ ಅಡಿಪಾಯಕ್ಕೆ ನಾಶವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಪೌರತ್ವ ತಿದ್ದುಪಡಿ ಮಸೂದೆ ಭಾರತದ ಸಂವಿಧಾನದ ಮೇಲೆ ದಾಳಿ ನಡೆಸಲಿದೆ, ಯಾರಾದರೂ ಇದನ್ನು ಬೆಂಬಲಿಸಿದರೆ, ನಮ್ಮ ದೇಶದ ಅಡಿಪಾಯ ನಾಶ ಮಾಡಿದಂತೆ ಎಂದು ಅವರು ಟ್ವೀಟ್ ಮೂಲಕ ಟೀಕಿಸಿದ್ದಾರೆ.
ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನ ದೇಶಗಳಲ್ಲಿ ಧಾರ್ಮಿಕ ದೌರ್ಜನ್ಯಕ್ಕೆ ಒಳಗಾಗಿ ವಲಸೆ ಬಂದಿರುವ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡುವುದು ಈ ತಿದ್ದುಪಡಿ ಮಸೂದೆಯ ಉದ್ದಿಶ್ಯವಾಗಿದೆ. 1971ರಲ್ಲಿ ಬಾಂಗ್ಲಾದೇಶ ಸೃಷ್ಟಿಯಾದಾಗ, ಉಗಾಂಡ ದೇಶದಲ್ಲಿ ಭಾರತೀಯರ ಮೇಲೆ ದಾಳಿಗಳಾದಾಗ, ಹೀಗೆ ಹಲವು ಸಂದರ್ಭಗಳಲ್ಲಿ ಸೂಕ್ತ ಕಾರಣಗಳ ಮೂಲಕ ಜನರಿಗೆ ಪೌರತ್ವ ನೀಡಿದ ಉದಾಹರಣೆಗಳುಂಟು ಎಂದು ಈ ಮಸೂದೆಯನ್ನು ಅಮಿತ್ ಶಾ ಸಮರ್ಥಿಸಿಕೊಂಡಿದ್ದಾರೆ.
ಲೋಕಸಭೆಯಲ್ಲಿ ಅಂಗೀಕೃತವಾಗಿದ್ದ, ಈ ಮಸೂದೆಯನ್ನು ನಾಳೆ ರಾಜ್ಯಸಭೆಯಲ್ಲಿ ಮಂಡಿಸಲಾಗುವುದು.
ಈ ಮಸೂದೆ ಅಗೋಚರ ವಿಭಜನೆ ಎಂದು ಸಾಮ್ನಾ ಟೀಕಿಸಿದ ಶಿವಸೇನೆ ಲೋಕಸಭೆಯಲ್ಲಿ ಈ ಮಸೂದೆ ಪರವಾಗಿ ಮತಚಲಾಯಿಸಿದೆ.
Comments are closed.