
ನವದೆಹಲಿ (ಡಿ.18): ದೇಶದೆಲ್ಲೆಡೆ ಕಿಚ್ಚು ಹೊತ್ತಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ವಿವಾದಾತ್ಮಕ ಹೊಸ ಪೌರತ್ವ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಿ 60 ಕ್ಕೂ ಹೆಚ್ಚು ಮನವಿಗಳಿಗೆ ಸ್ಪಂದಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನೋಟಿಸ್ ನೀಡಿದೆ.
ಕಾಯ್ದೆ ಕುರಿತು ವಿಚಾರಣೆ ನಡೆಸಿದ ಮುಖ್ಯನ್ಯಾಯಾಮೂರ್ತಿ ಎಸ್.ಎ ಬೋಬ್ಡೆ, ನ್ಯಾ. ಬಿಆರ್ ಗವಾಯಿ ಮತ್ತು ಸೂರ್ಯ ಕಾಂತ್ ತ್ರಿಸದಸ್ಯ ಪೀಠ, ಕಾಯ್ದೆ ತಡೆ ನೀಡಲು ಸಾಧ್ಯವಿಲ್ಲ. ಈ ಕುರಿತು ಜನವರಿ ಎರಡನೇ ವಾರದೊಳಗೆ ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರ ಕೇಳಿದೆ.
ಈ ಕಾಯ್ದೆಯನ್ನು ತಡೆಹಿಡಿಯಬೇಕೇ ಎಂದು ನಾವು ನೋಡಬೇಕಾಗಿದೆ ಹಾಗೂ ಈ ವಿಷಯದಲ್ಲಿ ಮುಂದಿನ ವಿಚಾರಣೆಯ ದಿನಾಂಕವಾಗಿ ಜನವರಿ 22ಕ್ಕೆ ವಿಚಾರಣೆ ದಿನಾಂಕ ನಿಗದಿಸಲಾಗಿದೆ.
ಇನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನೂತನ ಪೌರತ್ವ ತಿದ್ದುಪಡಿ ಮಸೂದೆಯೂ ಸಂವಿಧಾನದ 14ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಸುಪ್ರೀಂಕೋರ್ಟ್ಗೆ ಕಾಂಗ್ರೆಸ್ ಕೂಡ ಅರ್ಜಿ ದಾಖಲಿಸಿತ್ತು.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ವಿಪಕ್ಷಗಳು, ನಾಗರಿಕ ಸಮಾಜದ ಸದಸ್ಯರು ಈ ಕಾಯ್ದೆ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಇಲ್ಲಿಯವರೆಗೆ ಒಟ್ಟು 60 ಅರ್ಜಿಗಳು ಸುಪ್ರೀಂಕೋರ್ಟ್ಗೆ ಸಲ್ಲಿಕೆಯಾಗಿದೆ.
Comments are closed.