ರಾಷ್ಟ್ರೀಯ

ತಾರಕಕ್ಕೇರಿದ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿ ಪ್ರತಿಭಟನೆ, ತುರ್ತು ಸಭೆ ಕರೆದ ಅಮಿತ್‌ ಶಾ

Pinterest LinkedIn Tumblr


ಹೊಸದಿಲ್ಲಿ: ಉತ್ತರದಿಂದ ದಕ್ಷಿಣದವರೆಗೆ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿ ಪ್ರತಿಭಟನೆ ತಾರಕಕ್ಕೇರಿರುವ ಹಿನ್ನಲೆಯಲ್ಲಿ ಗೃಹ ಸಚಿವ ಅಮಿತ್‌ ಶಾ ಗುರುವಾರ ಸಂಜೆ ತುರ್ತು ಸಭೆ ಕರೆದಿದ್ದಾರೆ.

ರಾಜ್ಯಗಳ ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಅವರು ಈ ಪರಿಶೀಲನಾ ಸಭೆ ಕರೆದಿದ್ದು, ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌, ಗೃಹ ಖಾತೆ ರಾಜ್ಯ ಸಚಿವ ಜಿ ಕಿಶನ್‌ ರೆಡ್ಡಿ, ಗೃಹ ಇಲಾಖೆ ಕಾರ್ಯದರ್ಶಿ ಅಜಯ್‌ ಕುಮಾರ್‌ ಭಲ್ಲ ಭಾಗವಹಿಸಲಿದ್ದಾರೆ.

ಸಿಎಎ ಕಾಯಿದೆಗೆ ದೇಶಾದ್ಯಂತ ಭಾರಿ ಪ್ರತಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ತುರ್ತು ಸಭೆ ಕರೆದಿದ್ದಾರೆ. ತಮ್ಮ ನಿವಾಸದಲ್ಲೇ ಈ ಸಭೆ ಕರೆದಿದ್ದು ಹಲವು ಹಿರಿಯ ನಾಯಕರು ಇದರಲ್ಲಿ ಭಾಗವಹಿಸಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷರ ರಾಜಕೀಯ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧ್ಯಾ, ಆರ್‌ಪಿಎನ್‌ ಸಿಂಗ್‌, ದೀಪೆಂದರ್‌ ಸಿಂಗ್‌ ಹೂಡ ಸೋನಿಯಾ ಗಾಂಧಿ ನಿವಾಸಕ್ಕೆ ಬಂದಿದ್ದು ಸಭೆಯಲ್ಲಿ ಭಾಗವಹಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯಿದೆ ಹಿನ್ನೆಲೆಯಲ್ಲಿ ನಡೆಯುತ್ತಿರುವ ಪ್ರತಿಭಟನೆ ವಿಚಾರ ಸಭೆಯಲ್ಲಿ ಪ್ರಮುಖವಾಗಿ ಚರ್ಚೆ ನಡೆದಿದೆ.

Comments are closed.