
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಉಗ್ರಸ್ವರೂಪದ ಪ್ರತಿಭಟನೆಗಳು ನಡೆಯುತ್ತಿರುವುದರ ನಡುವೆಯೂ, ಪೌರತ್ವ ಕಾಯ್ದೆಯನ್ನು ಅನುಷ್ಠಾನ ಮಾಡಿಯೇ ಮಾಡುತ್ತೇವೆ ಎಂದು ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಅಲ್ಲದೇ, ಎನ್ಆರ್ಸಿ ಕೂಡ ಜಾರಿಯಾಗಲಿದೆ ಎಂದು ಹೇಳಿದ್ದಾರೆ.
ಅಫ್ಘಾನಿಸ್ತಾನದ ಸಿಖ್ ನಿರಾಶ್ರಿತರೊಂದಿಗೆ ಸಭೆ ಬಳಿಕ ಜೆ.ಪಿ. ನಡ್ಡಾ ಈ ಹೇಳಿಕೆ ನೀಡಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯಡಿ ಅಫ್ಘಾನ್ ಸಿಖ್ಖರು ಭಾರತದ ಪ್ರಜೆಗಳಾಗಲಿದ್ದಾರೆ. ಮತ್ತು ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದಕ್ಕಾಗಿ ವಿರೋಧ ಪಕ್ಷಗಳನ್ನು ಟೀಕಿಸಿದ್ದಾರೆ.
ನೆರೆಯ ಮೂರು ದೇಶಗಳ ಅಲ್ಪಸಂಖ್ಯಾತರು ಭಾರತದಲ್ಲಿ ಬದುಕು ಕಟ್ಟಿಕೊಳ್ಳಲಿದ್ದಾರೆ ಎಂಬುದನ್ನು ಕಡೆಗಣಿಸಿರುವ ವಿರೋಧ ಪಕ್ಷಗಳು ಕೇವಲ ರಾಜಕೀಯ ಮತ ಬ್ಯಾಂಕ್ಗಾಗಿ ಪ್ರತಿಭಟನೆ ನಡೆಸುತ್ತಿವೆ ಎಂದು ನಡ್ಡಾ ವಾಗ್ದಾಳಿ ನಡೆಸಿದರು. ಕಾಯ್ದೆಯ ವಿರುದ್ಧ ಪ್ರತಿಭಟನೆ ಮಾಡುತ್ತಿರುವವರು ಒಮ್ಮೆ ಅವರನ್ನು ಭೇಟಿಯಾಗಲಿ. ಈ ಜನರು ಭಾರತದಲ್ಲಿ 28-30 ವರ್ಷಗಳಿಂದ ವಾಸಿಸುತ್ತಿದ್ದಾರೆ. ಆದರೆ, ಅವರ ಮಕ್ಕಳನ್ನು ಶಾಲೆಗೆ ಸೇರಿಸುವುದಕ್ಕಾಗಲಿ ಅಥವಾ ಮನೆ ಖರೀದಿಸುವುದಕ್ಕಾಗಲಿ ಅವರಿಗೆ ಸಾಧ್ಯವಿಲ್ಲ. ಏಕೆಂದರೆ ಅವರಿಗೆ ಇಲ್ಲಿನ ಪ್ರಭುತ್ವ ಇಲ್ಲ. ವಿರೋಧ ಪಕ್ಷಗಳು ಮತ ಬ್ಯಾಂಕ್ ಬಿಟ್ಟು ಬೇರಾವುದನ್ನು ಯೋಚಿಸುವುದಿಲ್ಲ ಎಂದು ಹರಿಹಾಯ್ದರು.
ಇಡೀ ಭಾರತ ಜನರು ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆಯುತ್ತಿದ್ದಾರೆ. ಮತ್ತು ಅದನ್ನು ಮುಂದುವರೆಸಲಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನಗೊಳ್ಳುತ್ತದೆ. ಅದರಂತೆ ಎನ್ಆರ್ಸಿ ಕೂಡ ಭವಿಷ್ಯದಲ್ಲಿ ಜಾರಿಯಾಗಲಿದೆ ಎಂದು ಹೇಳಿದರು.
Comments are closed.