ಕರ್ನಾಟಕ

ಪೌರತ್ವ ತಿದ್ದುಪಡಿ ಕಾಯ್ದೆ: ರಾಜ್ಯದಲ್ಲಿ 144 ಸೆಕ್ಷನ್ ಜಾರಿ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿ

Pinterest LinkedIn Tumblr


ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ಜೋರಾಗಿರುವಂತೆಯೇ ಇತ್ತ ಕರ್ನಾಟಕದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ಕ್ರಮವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ರಾಜ್ಯಸಭೆ ಸದಸ್ಯರಾದ ರಾಜೀವ್ ಗೌಡ, ಕಾಂಗ್ರೆಸ್ ಶಾಸಕಿ ಸೌಮ್ಯರೆಡ್ಡಿ ಅವರು ರಾಜ್ಯ ಪೊಲೀಸ್ ಇಲಾಖೆ ಜಾರಿಗೊಳಿಸರುವ ನಿಷೇಧಾಜ್ಞೆಯನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ ಮತ್ತು ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರು ನಾಳೆ ಈ ಅರ್ಜಿಯ ವಿಚಾರಣೆ ನಡೆಸುವುದಾಗಿ ವಿಚಾರಣೆಯನ್ನು ಮುಂದೂಡಿದ್ದಾರೆ.

Comments are closed.