ಕರಾವಳಿ

ಮಂಗಳೂರು ಗಲಾಭೆಯಲ್ಲಿ ಕೇರಳ ಮೂಲದ ವ್ಯಕ್ತಿಗಳು ಶಂಕೆ!.. : 50ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ

Pinterest LinkedIn Tumblr

(ಗುರುವಾರದ ಘಟನೆಯ ಕಡತ ಚಿತ್ರ)

ಮಂಗಳೂರು, ಡಿಸೆಂಬರ್.20 : ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಗುರುವಾರ ನಡೆದ ಗಲಾಭೆಯಲ್ಲಿ ಕೇರಳ ಮೂಲದ ಕೆಲವು ವ್ಯಕ್ತಿಗಳು ಪಾಲ್ಗೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಇದಕ್ಕೆ ಪುಷ್ಠಿ ನೀಡುವಂತೆ ಇಂದು ಬೆಳಗ್ಗೆ ಕೇರಳದಿಂದ ರೈಲಿನಲ್ಲಿ ಮಂಗಳೂರಿಗೆ ಬಂದಿದ್ದಾರೆ ಎನ್ನಲಾದ ಕೇರಳ ಮೂಲದ ಪುರುಷರು ಹಾಗೂ ಮಹಿಳೆಯರೂ ಸೇರಿದಂತೆ ಸುಮಾರು ಐವತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಪೊಲೀಸರ ವಶದಲ್ಲಿರುವ ವ್ಯಕ್ತಿಗಳು ತಾವು ಮಾಧ್ಯಮದವರೆಂದು ತಿಳಿಸಿದ್ದು, ಅವರ ಬಳಿ ಮಾಧ್ಯಮಕ್ಕೆ ಸಂಬಂಧಪಟ್ಟ ದಾಖಲೆಗಳು ಇಲ್ಲದಿದ್ದುದ್ದರಿಂದ ಮುಂಜಾಗೃತ ಕ್ರಮವಾಗಿ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ.

(ಗುರುವಾರದ ಘಟನೆಯ ಕಡತ ಚಿತ್ರ)

ಗುರುವಾರ ಪೊಲೀಸರ ಗುಂಡಿಗೆ ಬಲಿಯಾದ ಇಬ್ಬರ ಮೃತದೇಹಗಳನ್ನು ವೆನ್ ಲಾಕ್ ಶವಾಗಾರದಲ್ಲಿ ಇರಿಸಲಾಗಿದೆ. ಶುಕ್ರವಾರ ಮುಂಜಾನೆ ಮಾಧ್ಯಮದವರು ಎಂದು ಹೇಳಿಕೊಂಡು ವೆನ್ ಲಾಕ್ ಆಸ್ಪತ್ರೆ ಬಳಿ ಕೆಲವರು ಸೇರಿದ್ದರು ಎಂದು ಹೇಳಲಾಗಿದೆ.

ಆದರೆ ಪೊಲೀಸರು ವಿಚಾರಿಸುವಾಗ ಅವರ ಬಳಿ ಸರಿಯಾದ ಗುರುತು ಚೀಟಿಗಳು ಇರಲಿಲ್ಲ. ಇವರಲ್ಲಿ ಹೆಚ್ಚಿನವರು ಕೇರಳದಿಂದ ಶುಕ್ರವಾರ ಮುಂಜಾನೆ ರೈಲಿನಲ್ಲಿ ಮಂಗಳೂರಿಗೆ ಬಂದವರು ಎಂದು ತಿಳಿದು ಬಂದಿದೆ. ಹಾಗಾಗಿ ಅವರ ಬಗ್ಗೆ ಸಂಶಯಗೊಂಡ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

Comments are closed.