
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ ಮೃತಪಟ್ಟ ಇಬ್ಬರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ ತಲಾ ಹತ್ತು ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
ಮೃತ ರ ಕುಟುಂಬಸ್ಥರಿಗೆ ಪರಿಹಾರವಾಗಿ ತಲಾ 10 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಕಳೆದ ಗುರುವಾರ ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಆದರೆ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದೆ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಬೆಂಗ್ರೆ ನಿವಾಸಿ 23 ವರ್ಷದ ನೌಶೀನ್ ಮತ್ತು 49 ವರ್ಷದ ಜಲೀಲ್ ಎಂಬುವರು ಮೃತಪಟ್ಟಿದ್ದಾರೆ.
ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಉಲ್ಲಂಘಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು ಅಲ್ಲದೆ ಗಾಳಿಯಲ್ಲಿ ಗುಂಡು ಸಹ ಹಾರಿಸಿದ್ದರು.
Comments are closed.