ಮಂಗಳೂರು, ಡಿಸೆಂಬರ್.22: ಮಂಗಳೂರಿನಲ್ಲಿ ಡಿಸೆಂಬರ್ 19 ಗುರುವಾರದಂದು ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಗರದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ನಡೆದ ಹಿಂಸಾಚಾರದ ಸಂದರ್ಭ ಪೊಲೀಸರ ಗೋಲಿಬಾರ್‌ಗೆ ಬಲಿಯಾದ ಬಂದರ್ ಕಂದುಕ ನಿವಾಸಿ ಅಬ್ದುಲ್ ಜಲೀಲ್ ಅವರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿ ಐದು ಲಕ್ಷ ರೂ.ನ ಚೆಕ್ ವಿತರಿಸಿದರು.
ಈ ಸಂದರ್ಭ ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಬೋಜೇಗೌಡ, ಬಿ.ಎಂ.ಫಾರೂಕ್, ಜೆಡಿಎಸ್ ದ.ಕ. ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಞಿ ವಿಟ್ಲ ಮತ್ತಿತತರು ಜೊತೆಗಿದ್ದರು.





Comments are closed.