ಮಂಗಳೂರು, ಡಿಸೆಂಬರ್ 23: ಮಂಗಳೂರಿನಲ್ಲಿ ಡಿಸೆಂಬರ್ 19ರಂದು ಗೋಲಿಬಾರ್ ಪ್ರಕರಣದ ತನಿಖೆಯನ್ನು ಹೈಕೋರ್ಟ್ ನ್ಯಾಯಾಧೀಶರಿಗೆ ಒಪ್ಪಿಸಬೇಕು.ಈ ಬಗ್ಗೆ ಅಸೆಂಬ್ಲಿಯಲ್ಲಿ ಒತ್ತಾಯಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯ ಸಂದರ್ಭ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಉಂಟಾದ ಘರ್ಷಣೆಯಲ್ಲಿ ಗೋಲಿಬಾರ್‌ಗೆ ಬಲಿಯಾದ ಕುಟುಂಬಕ್ಕೆ ಸಾಂತ್ವನ ಹೇಳಲು ಸಿದ್ದರಾಮಯ್ಯ ಅವರು ಸೋಮವಾರ ಮಂಗಳೂರಿಗೆ ಆಗಮಿಸಿದ ಸಂದರ್ಭ ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.
ಪ್ರಕರಣದ ತನಿಖೆಯನ್ನು ಯಾವೂದೇ ಕಾರಣಕ್ಕೂ ಸಿಐಡಿಗೆ ವಹಿಸಿರುವುದು ಸರಿಯಲ್ಲ. ಫೈರಿಂಗ್ ಮಾಡಿರುವುದು ಪೊಲೀಸರು. ಸಿಐಡಿಯಲ್ಲಿ ಇರುವುದು ಪೊಲೀಸರೇ. ಪೊಲೀಸರ ಬಗ್ಗೆ ಪೊಲೀಸ್ ಇಲಾಖೆಯಿಂದಲೇ ತನಿಖೆ ಮಾಡಿದರೆ ಯಾವ ರೀತಿಯ ನ್ಯಾಯ ಸಿಗಬಹುದು ಎಂದು ಪ್ರಶ್ನಿಸಿದ ಅವರು ಈ ಪ್ರಕರಣದ ತನಿಖೆ ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದಲ್ಲೇ ಆಗಬೇಕು ಎಂದು ಆಗ್ರಹಿಸಿದರು.
ಈ ವೇಳೆ ಮಾಜಿ ಸಚಿವರಾದ ಎಂ.ಬಿ.ಪಾಟೀಲ್, ಝಮೀರ್ ಅಹ್ಮದ್, ಯು.ಟಿ.ಖಾದರ್ ಮತ್ತಿತರರು ಉಪಸ್ಥಿತರಿದ್ದರು.

Comments are closed.