ಉಡುಪಿ: ಅನಾರೋಗ್ಯದಿಂದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ಮಠದ ವಿಶ್ವೇಶ್ವರ ತೀರ್ಥರ ಆರೋಗ್ಯದ ಬಗ್ಗೆ ಮಣಿಪಾಲ ಆಸ್ಪತ್ರೆ ವೈದ್ಯರು ಸೋಮವಾರ ಮಧ್ಯಾಹ್ನ ಆರೋಗ್ಯ ವರದಿ ಪ್ರಕಟಿಸಿದ್ದಾರೆ. ಈ ಹೆಲ್ತ್ ಬುಲೇಟಿನ್ ನಲ್ಲಿ ಪೇಜಾವರ ಶ್ರೀಗಳ ಆರೋಗ್ಯ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಶ್ರೀಗಳನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದ್ದು, ಅವರಿಗೆ ಕೃತಕ ಉಸಿರಾಟದ (ವೆಂಟಿಲೇಟರ್) ವ್ಯವಸ್ಥೆ ಮಾಡಲಾಗಿದೆ. ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಹೆಲ್ತ್ ಬುಲೆಟಿನ್ ನಲ್ಲಿ ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.
Comments are closed.