
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ ಪೊಲೀಸರು ಮಹತ್ವದ ಯಶಸ್ಸನ್ನು ಸಾಧಿಸಿದ್ದಾರೆ. ಈ ಪ್ರಕರಣದ ಮಾಸ್ಟರ್ ಮೈಂಡ್ ರಿಷಿಕೇಷ್ ರಿಷಿಕೇಶ್ ದೇವಾಡಿಕರ್ ಎಂಬಾತನನ್ನು ಎಸ್.ಐ.ಟಿ. ವಶಕ್ಕೆ ಪಡೆದುಕೊಂಡಿದೆ.
ಜಾರ್ಖಂಡ್ ಮೂಲದವನಾಗಿರುವ ರಿಷಿಕೇಶ್ ನನ್ನು ಎಸ್.ಐ.ಟಿ. ಪೊಲೀಸರ ತಂಡ ಜಾರ್ಖಂಡ್ ನಲ್ಲಿ ತಮ್ಮ ವಶಕ್ಕೆ ಪಡೆದುಕೊಂಡಿರುವ ಕುರಿತಾಗಿ ಮಾಹಿತಿ ಲಭ್ಯವಾಗಿದೆ.
ಈಗಾಗಲೇ ಗೌರಿ ಲಂಕೇಶ್ ಅವರ ಮೇಲೆ ಗುಂಡು ಹಾರಿಸಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಈ ಹತ್ಯೆಗೆ ಯೋಜನೆ ರೂಪಿಸಿದ ಪ್ರಮುಖ ವ್ಯಕ್ತಿಯನ್ನು ಬಂಧಿಸುವ ಮೂಲಕ ಈ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಂತಾಗಿದೆ.
Comments are closed.