
ಚಿಕ್ಕಬಳ್ಳಾಪುರ: ಶೀಲ ಶಂಕಿಸಿ ಪತ್ನಿಯನ್ನು ಗೋಡೆಗೆ ಗುದ್ದಿ ಕೊಲೆ ಮಾಡಿದ್ದ ಆರೋಪಿಗೆ 4ನೇ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.
ಪತಿ ಮಂಜುನಾಥ್ ಜೀವಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿ. 2018ರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ದರ್ಗಾಜೋಗಹಳ್ಳೀಯ ಹೈಟೆಕ್ ಕಾಲೋನಿಯಲ್ಲಿ ಘಟನೆ ನಡೆದಿತ್ತು.
ಮಂಜುನಾಥ್ ತನ್ನ ಪತ್ನಿ ವಿಜಯಮ್ಮನ ಶೀಲ ಶಂಕಿಸಿ ಕೊಲೆ ಮಾಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರು ಅಪರಾಧಿಯನ್ನು ಬಂಧಿಸಿ, ವಿಚಾರಣೆ ನಡೆಸಿದ್ದರು. ಸುದೀರ್ಘ ತನಿಖೆ ನಡೆಸಿದ ಸರ್ಕಲ್ ಇನ್ಸ್‌ಪೇಕ್ಟರ್ ಸಿದ್ದರಾಜು ಅವರು ದೊಡ್ಡಬಳ್ಳಾಪುರದ ಜಿಲ್ಲಾ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಚಂದ್ರಶೇಖರ್ ಅವರು ಕೊಲೆ ಮಾಡಿದ್ದ ಮಂಜುನಾಥ್‍ಗೆ 50 ಸಾವಿರ ರೂ. ದಂಡ ಮತ್ತು ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.
Comments are closed.