ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಾರ್ಯಾಲಯ ಹಾಗೂ ಅಧ್ಯಕ್ಷರ ಆಪ್ತ ಶಾಖೆಯಲ್ಲಿ ಸುಮಾರು 27 ವರ್ಷಗಳಿಂದ ನೌಕರರಾಗಿ ಸೇವೆ ಸಲ್ಲಿಸಿದ ದಿವಾಕರ ಶೆಟ್ಟಿಯವರು ಜನವರಿ 31 ರಂದು ವಯೋ ನಿವೃತ್ತಿ ಹೊಂದಿರುತ್ತಾರೆ.
ಇವರಿಗೆ ದಕ ಜಿಲ್ಲಾ ಪಂಚಾಯತ್ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ನಡೆಸಲಾಯಿತು. ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ ಹಾಗೂ ಜಿಲ್ಲಾ ಪಂಚಾಯತ್ ಕಚೇರಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Comments are closed.