ಕರಾವಳಿ

ಉಡುಪಿ ಕೃಷ್ಣಮಠದ ಮಧ್ವ ಸರೋವರದಲ್ಲಿ ಮುಳುಗಿ ಚೆನ್ನೈ ಮೂಲದ ವ್ಯಕ್ತಿ ಸಾವು

Pinterest LinkedIn Tumblr

ಉಡುಪಿ: ಇಲ್ಲಿನ ಶ್ರೀ ಕೃಷ್ಣ ಮಠದ ಮಧ್ವ ಸರೋವರದಲ್ಲಿ ತೀರ್ಥಸ್ನಾನಕ್ಕೆ ಇಳಿದ ಭಕ್ತರೊಬ್ಬರು ಮಧ್ವಸರೋವರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಉಡುಪಿ ಕೃಷ್ಣಮಠದಲ್ಲಿ ಇಂದು ಮುಂಜಾನೆ ದುರ್ಘಟನೆ ನಡೆದಿದೆ. ಚೆನ್ನೈ ಮೂಲದ ಕ್ಯಾಪ್ಟನ್ ಜಿ ಶ್ರೀಧರನ್ (62) ಮೃತ ದುರ್ದೈವಿ.

ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆಯಲು ಬಂದಿದ್ದ ಇವರು ಮಧ್ವ ಸರೋವರದಲ್ಲಿ ತೀರ್ಥಸ್ನಾನಕ್ಕೆ ಇಳಿದಿದ್ದಾರೆ. ಸರೋವರ ಆಳವಿದ್ದ ಕಾರಣ ಈಜಲು ಬಾರದೆ ಮುಳುಗಿದ್ದಾರೆ. ಸುದ್ದಿ ತಿಳಿಯುತ್ತಲೇ ಅಗ್ನಿಶಾಮಕ ದಳದ ಸಿಬ್ಬಂದಿಗಳ ಆಗಮಿಸಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಮೃತದೇಹವನ್ನು ಅಜ್ಜರಕಾಡು ಆಸ್ಪತ್ರೆಗೆ ರವಾನಿಸಿ ಅಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.