ಕರಾವಳಿ

ಉಡುಪಿ: ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ-ಮಹಿಳೆ ಸ್ಥಳದಲ್ಲೇ ಸಾವು

Pinterest LinkedIn Tumblr

ಉಡುಪಿ: ಖಾಸಗಿ ಬಸ್ ಡಿಕ್ಕಿ ಹೊಡೆದು ಸ್ಕೂಟಿ ಸವಾರಿ ಮಾಡುತ್ತಿದ್ದ ಮಹಿಳೆ ಸ್ಥಳದಲ್ಲೆ ಮೃತ ಪಟ್ಟ ಘಟನೆ ಕಿನ್ನಿಮೂಲ್ಕಿ ಬಳಿ ಗುರುವಾರ ರಾತ್ರಿ ನಡೆದಿದೆ. ಮೃತರನ್ನು ಅಲೆವೂರು ಗ್ರಾಮ ಪಂಚಾಯತ್ ಸದಸ್ಯ ಸುಧಾಕರ್ ಪೂಜಾರಿ ಎನ್ನುವರ ಪತ್ನಿ, ಬ್ಯೂಟಿ ಪಾರ್ಲರ್ ಮಾಲಕಿ ಅಂಬಾಲಪಾಡಿ ನಿವಾಸಿ ಮಮತ ಪೂಜಾರಿ(35) ಎಂದು ಗುರುತಿಸಲಾಗಿದೆ.

ಗುರುವಾರ ರಾತ್ರಿ 8.45 ಸುಮಾರಿಗೆ ಕಿನ್ನಿಮೂಲ್ಕಿ ಪೆಟ್ರೊಲ್ ಪಂಪ್‌ನಿಂದ ತನ್ನ ಸ್ಕೂಟಿಗೆ ಪೆಟ್ರೋಲ್ ಹಾಕಿಸಿ ಗೋವಿಂದ ಕಲ್ಯಾಣ ಮಂಟಪ ಕಡೆ ಹೋಗುತ್ತಿರುವಾಗ ಈ ಅವಘಡ ಸಂಭವಿಸಿದೆ.

ಮಂಗಳೂರಿನಿಂದ ಉಡುಪಿ ಕಡೆ ವೇಗವಾಗಿ ಬರುತ್ತಿದ್ದ ಖಾಸಗಿ ಎಕೆಎಮ್‌ಎಸ್ ಬಸ್ ಚಾಲಕ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದು ಸವಾರೆ ಬಸ್ಸಿನ ಎಡ ಬದಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತ ಪಟ್ಟಿರುವುದಾಗಿ ತಿಳಿದುಬಂದಿದೆ.

ಅಪಘಾತ ನಂತರ ಬಸ್ ಚಾಲಕ, ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ. ಅಪಘಾತದಿಂದ ಬಸ್ ಸ್ಕೂಟಿಯನ್ನು ಹಲವು ದೂರ ಎಳೆದು ಕೊಂಡು ಹೋಗಿದೆ. ಬಸ್ ಚಾಲಕ ಮೊಬೈಲ್ ನಲ್ಲಿ ಮಾತನಾಡುತ್ತ ಬಸ್ ಚಲಾಯಿಸುತ್ತಿದ್ದ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Comments are closed.