
ಅನಂತ್ ನಾಗ್: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಸಂಗಮ್ ಎಂಬಲ್ಲಿ ಶನಿವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಲಷ್ಕರ್ ಇ ತೊಯ್ಬಾ ಉಗ್ರಗಾಮಿ ಸಂಘಟನೆಯ ಇಬ್ಬರು ಮೃತಪಟ್ಟಿದ್ದಾರೆ.
ಕಳೆದ ರಾತ್ರಿಯಿಂದಲೇ ಸಂಗಮ್ ಪ್ರದೇಶದ ಬಿಜ್ಬೆಹಾರಾದಲ್ಲಿ ಭದ್ರತಾ ಪಡೆ ಯೋಧರು ಮತ್ತು ಉಗ್ರಗಾಮಿಗಳ ನಡುವೆ ಗುಂಡಿನ ಚಕಮಕಿ ಆರಂಭವಾಗಿತ್ತು. ಪೊಲೀಸರು, ಸಿಆರ್ ಪಿಎಫ್ ಯೋಧರು ಮತ್ತು ಭಾರತೀಯ ಸೇನಾ ಯೋಧರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿಯಾಗಿದೆ.
ಸ್ಥಳದಿಂದ ಮದ್ದುಗುಂಡು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
Comments are closed.