
ಸಿಂಧನೂರು: ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ವಿದ್ಯಾರ್ಥಿನಿ ಅಮೂಲ್ಯಗೆ ಕಾನೂನು ಪ್ರಕಾರ ಶಿಕ್ಷೆ ಆಗುತ್ತದೆ. ಇವರಿಗೆ ಕೆಲ ಸಂಘಟನೆಗಳು ಪ್ರಚೋದನೆ ನೀಡುತ್ತಿದ್ದು, ಇದು ಸರಿಯಲ್ಲ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶದಲ್ಲಿ ಕೆಲ ಸಂಘಟನೆಗಳು, ವ್ಯಕ್ತಿಗಳು ಮುಗ್ಧ ಮಕ್ಕಳನ್ನು ಬಳಸಿಕೊಂಡು ದೇಶದ್ರೋಹಿ ಹೇಳಿಕೆಗಳನ್ನು ಕೊಡಿಸುವ ಕೆಲಸ ಮಾಡುತ್ತಿವೆ.
ದೇಶದಲ್ಲಿ ಇದ್ದುಕೊಂಡು ಹೊರ ದೇಶವನ್ನು ಕೊಂಡಾಡುವುದು ಸರಿಯಲ್ಲ. ಇದು ನಾಚಿಕೆಗೇಡಿನ ಸಂಗತಿ. ಹಾಗಾಗಿ ಅಂಥವರಲ್ಲಿ ದೇಶಪ್ರೇಮ ಬಿತ್ತುವ ಅಗತ್ಯವಿದೆ ಎಂದರು.
Comments are closed.