ಮನೋರಂಜನೆ

ಹೆಂಡ ಕುಡಿದು ಸರಕಾರಿ ಆಸ್ಪತ್ರೆಯಲ್ಲೇ ಬೆತ್ತಲೆ ಮಲಗಿದ ಡಾಕ್ಟರ್: ಚಿಕಿತ್ಸೆ ಸಿಗದೆ ಮೃತಪಟ್ಟ ಮಹಿಳೆ

Pinterest LinkedIn Tumblr


ಚಿಕ್ಕಮಗಳೂರು: ಪಾನಮತ್ತನಾದ ವೈದ್ಯ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡದ ಕಾರಣ ಮಹಿಳೆ ಮೃತಪಟ್ಟಿರುವ ಘಟನೆ ಜಿಲ್ಲೆಯ ಅಜ್ಜಂಪುರದಲ್ಲಿ ಫೆಬ್ರವರಿ 29 ರಂದು ಶನಿವಾರ ರಾತ್ರಿ ನಡೆದಿದೆ. ಘಟನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಾನಮತ್ತನಾಗಿ ಸರಕಾರಿ ಆಸ್ಪತ್ರೆಯ ವೈದ್ಯ ಡಾ.ಚನ್ನಕೇಶವ ಆಸ್ಪತ್ರೆಯಲ್ಲೇ ಅಸಭ್ಯವಾಗಿ ಬೆತ್ತಲಾಗಿ ಮಲಗಿದ್ದಾರೆ. ಇದರಿಂದಾಗಿ ಚಿಕಿತ್ಸೆ ಸಿಗದೆ ಮಹಿಳೆ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ವೈದ್ಯ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡದ ಕಾರಣ ರೋಗಿ ಬಲಿಯಾಗಿದ್ದಾರೆ. ಬಲಿಯಾದ ಮಹಿಳೆಯನ್ನು ಅಜ್ಜಂಪುರ ತಾಲೂಕಿನ ಪುಟ್ಟಮ್ಮ ಎಂದು ಗುರುತಿಸಲಾಗಿದೆ.

ಈ ಹಿನ್ನೆಲೆ ವೈದ್ಯನ ಅಸಭ್ಯ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ವೈದ್ಯನ ವಿರುದ್ಧ ದೂರು ದಾಖಲಾಗಿದೆ.

Comments are closed.